ನವದೆಹಲಿ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ನ್ಯಾಯಾಲಯ, ಎರಡು ವಾರಗಳೊಳಗೆ ಶರಣಾಗುವಂತೆ ನಿರ್ದೇಶಿಸಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
2016ರ ಜೂನ್ 15ರಂದು ಧಾರವಾಡದ ಜಿಮ್‌ನಲ್ಲಿ ಯೋಗೇಶ್ ಗೌಡ ಹತ್ಯೆಯಾಗಿದ್ದರು. ಸಿಬಿಐ ತನಿಖೆ ನಡೆಸಿರುವ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.



