Mysore
29
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯ ಸೇರ್ಪಡೆಗೆ ಚಿಂತನೆ: ಸಿಎಂ ಡಿಕೆಶಿ

ಮೈಸೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯಗಳನ್ನು ಅಳವಡಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಅಗತ್ಯವಿದೆ ಎಂದರು.

ಸಂವಿಧಾನ ಕೇವಲ ಕಾನೂನಿನ ಪುಸ್ತಕವಲ್ಲ; ಅದು ಭಾರತೀಯರ ಪವಿತ್ರ ಗ್ರಂಥ ಹಾಗೂ ದೇಶದ ಅಂತರಾತ್ಮ. ಜನರ ಹಕ್ಕುಗಳನ್ನು ಕಾಪಾಡುವ ಬಹುದೊಡ್ಡ ಶಕ್ತಿ ಎಂದು ಬಣ್ಣಿಸಿದರು.

ಇದೇ ವೇಳೆ, ‘ವೋಟ್‌ ಚೋರಿ’ ಮೂಲಕ ಹಿಂದುಳಿದವರು, ದಲಿತರು ಹಾಗೂ ಮುಸ್ಲಿಮರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಸಂವಿಧಾನ ನಮ್ಮ ಹಕ್ಕು ಮತ್ತು ಹೊಣೆಗಾರಿಕೆ ಎಂದು ಪ್ರತಿಪಾದಿಸಿದರು.

Tags:
error: Content is protected !!