Mysore
28
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಕೊಡಗಿನಲ್ಲಿ ಕಾಡಾನೆ ದಾಳಿಗೆ ಜೀವಹಾನಿ: ಶಾಶ್ವತ ಪರಿಹಾರಕ್ಕೆ ಕುಟುಂಬಸ್ಥರು–ಗ್ರಾಮಸ್ಥರ ಆಗ್ರಹ!

ಕೊಡಗು: ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆಗಳ ಹಾವಳಿ ಹೆಚ್ಚುತ್ತಿದ್ದರೂ ಸಮಸ್ಯೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಅವರು, ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

ಜನವಸತಿ ಪ್ರದೇಶಗಳು ಹಾಗೂ ರಸ್ತೆಗಳಲ್ಲಿಯೂ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರ ಜೀವ ರಕ್ಷಣೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಆನೆಗಳ ಮೇಲೆ ದಾಳಿ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡುವ ಅಧಿಕಾರಿಗಳು, ಜನರ ಸುರಕ್ಷತೆಗೂ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ತಕ್ಷಣ ಸ್ಪಂದಿಸಿ, ಮತ್ತಷ್ಟು ಜೀವಹಾನಿಯಾಗದಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:
error: Content is protected !!