ಮಡಿಕೇರಿ: ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಮಡಿಕೇರಿಯ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆಗಮಿಸಿದ ರೈನಾ, ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿ ದೇವರ ದರ್ಶನ ಪಡೆದರು.
ಕೊಡಗು ಪ್ರವಾಸದಲ್ಲಿರುವ ಸುರೇಶ್ ರೈನಾ ಕುಟುಂಬ ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದೆ.




