Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಹಾಸನದ ನಿಡುಡಿ ಬಳಿ ಹಾಡಹಗಲೇ ಜೋಡಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ

ಹಾಸನ: ಜನರು ಓಡಾಡುವ ರಸ್ತೆಯಲ್ಲೇ ಹಾಡಹಗಲು ಎರಡು ಚಿರತೆಗಳು ಕಾಣಿಸಿಕೊಂಡಿವೆ. ಈ ಘಟನೆ ನಡೆದದ್ದು ಹಾಸನ ತಾಲೂಕಿನ ನಿಡುಡಿ ಗ್ರಾಮದ ಬಳಿ.

ಈ ಹಿಂದೆಯೂ ಗ್ರಾಮದ ಸುತ್ತಮುತ್ತ ಚಿರತೆಗಳು ಕಾಣಿಸಿಕೊಂಡು ಬೀದಿನಾಯಿಗಳು ಮತ್ತು ಜಾನುವಾರುಗಳ ಮೇಲೆ ದಾಳಿ ನಡೆಸಿದ್ದವು ಎಂದು ವರದಿಯಾಗಿದೆ.

ರಾತ್ರಿ ವೇಳೆ ಗ್ರಾಮದೊಳಗೆ ನುಗ್ಗುತ್ತಿದ್ದ ಚಿರತೆಗಳು ಈಗ ಹಗಲಿನಲ್ಲೂ ರೈತರ ಜಮೀನಿನಲ್ಲಿ ಕಾಣಿಸಿಕೊಳ್ಳುತ್ತಿವೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಚಿರತೆಗಳನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

Tags:
error: Content is protected !!