Mysore
30
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ | ಭರವಸೆ ಈಡೇರಿಸಲು ಬದ್ಧ ಎಂದ ಮೋದಿ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಆ ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೆ ಎಂದಿದ್ದಾರೆ. ಮಹಿಳೆಯರಿಗೆ ಅವರ ಹಕ್ಕು ದೊರಕಿಸುವ ದಾರಿಯಲ್ಲಿರುವ ಅಡೆತಡೆಗಳನ್ನು ನಿವಾರಿಸುವುದಾಗಿಯೂ ಮೋದಿ ಹೇಳಿದ್ದಾರೆ.

Tags:
error: Content is protected !!