Mysore
30
broken clouds

Social Media

ಶನಿವಾರ, 28 ನವೆಂಬರ್ 2026
Light
Dark

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಇಂಡಿಯಾ ಮೈತ್ರಿಕೂಟದ ವಿರೋಧ | ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

mallikharjuna kharge

ನವದೆಹಲಿ: ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಯನ್ನು ವಿರೋಧಿಸುವುದಾಗಿ ಇಂಡಿಯಾ ಮೈತ್ರಿಕೂಟ ಘೋಷಿಸಿದೆ. ನವೆಂಬರ್ 30ರಂದು ಲೋಕಸಭೆಯಲ್ಲಿ ಮಸೂದೆ ಚರ್ಚೆಗೆ ಬರುವ ನಿರೀಕ್ಷೆಯಿದೆ.

ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಕೇಂದ್ರದ ಪ್ರಸ್ತಾವವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಲೋಕಸಭೆ ವಿಸ್ತರಣೆಯ ಮೂಲಕ ಅಧಿಕಾರವನ್ನು ಕೇಂದ್ರೀಕರಿಸಿ, ಅದನ್ನು ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯ ಹಿಂದಿನ ‘400 ಪಾರ್’ ಘೋಷಣೆಯನ್ನು ಪ್ರಸ್ತಾಪಿಸಿದ ಖರ್ಗೆ, ಈಗ ‘800 ಪಾರ್’ ಗುರಿ ಇಟ್ಟುಕೊಂಡಿದೆ ಎಂದು ಟೀಕಿಸಿದ್ದಾರೆ.

ಮಸೂದೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಹಿತಾಸಕ್ತಿಗಳಿಗೆ ಸಾಕಷ್ಟು ರಕ್ಷಣೆ ಇಲ್ಲ ಎಂದಿರುವ ಖರ್ಗೆ, ಮಸೂದೆಗೆ ಬೆಂಬಲ ಘೋಷಿಸಿದ ಡಿಎಂಕೆ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಮೈತ್ರಿಕೂಟದ ಸಭೆಗೆ ಗೈರಾಗಿತ್ತು.

Tags:
error: Content is protected !!