ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಮಹಿಳೆಯರಿಗೆ ರಾಜಕೀಯದಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಹೋರಾಟ ದಶಕಗಳಿಂದ ನಡೆಯುತ್ತಿದೆ ಎಂದಿದ್ದಾರೆ.
ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಎನ್ಡಿಎ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ. ಕೆಲವು ಪಕ್ಷಗಳು ದೇಶದ ಹಿತಕ್ಕಿಂತ ಪಕ್ಷದ ಹಿತಕ್ಕೆ ಆದ್ಯತೆ ನೀಡುತ್ತಿವೆ ಎಂದು ಆರೋಪಿಸಿದ ಅವರು, ಇದರಿಂದ ಮಹಿಳೆಯರಿಗೂ ದೇಶಕ್ಕೂ ತೊಂದರೆಯಾಗುತ್ತದೆ ಎಂದಿದ್ದಾರೆ.




