ಅವರನ್ನು ಹೊಗಳಿದರು. 75 ವರ್ಷಗಳ ಸ್ವಾತಂತ್ರ್ಯದ ಪಯಣ, ಸ್ವಾತಂತ್ರ್ಯದ ಹೋರಾಟ ಮತ್ತು ಮುಂದಿನ ಅಭಿವೃದ್ಧಿಯ ಹಾದಿಯನ್ನು ಹಿಂತಿರುಗಿ ನೋಡಿದಾಗ ದೇಶವು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರಿದಿದೆ ಎಂದರು.
ಭಾರತವು ತನ್ನ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವಾಗ, ಭಾರತದ ಅಭಿವೃದ್ಧಿಯನ್ನು ಮುನ್ನಡೆಸುವಾಗ ಆರೋಗ್ಯ ಮತ್ತು ಡಿಜಿಟಲ್ ರೂಪಾಂತರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ನಾನು ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯು ಸ್ಪೂರ್ತಿದಾಯಕವಾಗಿದೆ ಮತ್ತು ಈ ಪ್ರಯಾಣದಲ್ಲಿ ಪಾಲುದಾರರಾಗಲು ನಾವು ಅದೃಷ್ಟವಂತರು ಎಂದು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಜುಲೈನಲ್ಲಿ, ಲಾಭೋದ್ದೇಶವಿಲ್ಲದ ಸಂಸ್ಥೆಯನ್ನು ನಡೆಸುತ್ತಿರುವ ಬಿಲ್ ಗೇಟ್ಸ್ , ಭಾರತದ ಮೈಲಿಗಲ್ಲನ್ನು ಒಪ್ಪಿಕೊಂಡರು. ಭಾರತ ಜಗತ್ತಿಗೆ ಕೋವಿಡ್ ವಿರುದ್ಧ ಹೋರಾಡಲು 200 ಕೋಟಿ ಲಸಿಕೆ ಡೋಸ್‌ಗಳನ್ನು ನೀಡುತ್ತಿದೆ. 200 ಕೋಟಿ ಲಸಿಕೆಗಳನ್ನು ನೀಡುವ ಮತ್ತೊಂದು ಮೈಲಿಗಲ್ಲುನ್ನು ಸಾಧಿಸಿದ ಮೋದಿ ಅವರಿಗೆ ಅಭಿನಂದನೆಗಳು ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ . ಕೋವಿಡ್ -19 ರ ಪರಿಣಾಮವನ್ನು ತಗ್ಗಿಸಲು ಭಾರತೀಯ ಲಸಿಕೆ ತಯಾರಕರು ಮತ್ತು ಭಾರತ ಸರ್ಕಾರದೊಂದಿಗೆ ನಮ್ಮ ನಿರಂತರ ಪಾಲುದಾರಿಕೆಗಾಗಿ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿದರು.
As India celebrates its 75th Independence Day, I congratulate @narendramodi for prioritizing healthcare and digital transformation while spearheading India’s development. India's progress in these sectors is inspiring and we are fortunate to partner in this journey #AmritMahotsav
— Bill Gates (@BillGates) August 15, 2022