Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸ್ವಾತಂತ್ರ್ಯದ ಅಮೃತಕಾಲದಲ್ಲಿ ಶಿಕ್ಷಣ ರಂಗದಲ್ಲಿರುವ ನಾವು ನಮ್ಮ ಕೊಡುಗೆ ಬಗ್ಗೆ ಯೋಚಿಸಬೇಕಾಗಿದೆ : ಪ್ರೊ.ಜಿ.ಹೇಮಂತ್ ಕುಮಾರ್

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಅಮೃತಕಾಲದಲ್ಲಿ ರಣರಂಗದಲ್ಲಿರುವ ನಾವು ನಮ್ಮ ಕೊಡುಗೆಯ ಬಗ್ಗೆ ಯೋಚಿಸಬೇಕಾಗಿದೆ ಒಂದೊಂದು ಶಿಕ್ಷಣ ಸಂಸ್ಥೆಯೂ ತನ್ನ ಕಣ್ಣೀರಿಗೆ ಗುರಿಗಳನ್ನು ಇಟ್ಟುಕೊಂಡು ಅದನ್ನು ಸಾಧಿಸುವ ಕಡೆ ಮನಸ್ಸು ಮಾಡಬೇಕಾಗಿದೆ. ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಇಡೀ ದೇಶದ ಜನರನ್ನು ಎಚ್ಚರಿಸಿ ಸ್ವಾತಂತ್ರ್ಯದ ಅಗತ್ಯವನ್ನು ಒತ್ತಿ ಹೇಳಿದರು. ಗಾಂಧೀಜಿ ಸೇರಿದಂತೆ ಚರಿತ್ರೆಯಲ್ಲಿ ಬರುವ ಭಗತ್ ಸಿಂಗ್ ,ಮಂಗಲ್ ಪಾಂಡೆ, ಚಂದ್ರಶೇಖರ ಆಜಾದ್ ,ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಬಾಯ್ ಪಟೇಲ್ ಇವರುಗಳನ್ನು ಮರೆಯಲಾಗದು. ಎಂದರು.

ಕುಲಸಚಿವ ಪ್ರೊ.ಆರ್. ಶಿವಪ್ಪ, ಪರೀಕ್ಷಾಂಗ ಕುಲ ಸಚಿವ ಪ್ರೊ.ಎ.ಪಿ. ಜ್ಞಾನಪ್ರಕಾಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ