ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸುತ್ತಿದ್ದು ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಪುಟ್ಟಮಾದಯ್ಯ ಅವರ ಪುತ್ರ ಮೂರ್ತಿ (೨೯) ಎಂಬವರೇ ಮೃತ ದುರ್ದೈವಿ. ರಾತ್ರಿ ಪೂರ್ತಿ ಸುರಿದ ಮಳೆಗೆ ಮಣ್ಣಿನ ಗೋಡೆ ಕುಸಿದು ನಿದಿರೆ ಮಾಡುತ್ತಿದ್ದ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಆಸ್ಪತ್ರೆಗೆ ತಂದಿದ್ದು ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.