Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಹನೂರು : ಕಳಪೆ ಕಾಮಗಾರಿ ಪರಿಶೀಲನೆ

ಹನೂರು : ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಟ್ಟಣದ ಎರಡನೇ ವಾರ್ಡ್ ನ ಸಮೀಪ ಇರುವ ತಟ್ಟೆಹಳ್ಳಕ್ಕೆ ಸುಮಾರು ಮೂವತ್ತು ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ಮೇಲ್ಸೇತುವೆ ಶಿಥಿಲಗೊಂಡಿದ್ದ ಹಿನ್ನೆಲೆ 1ಕೋಟಿ ವೆಚ್ಚದಲ್ಲಿ ನೂತನ ಸೇತುವೆ ಕಾಮಗಾರಿ ಪ್ರಗತಿಯಲ್ಲಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು .ಭಾನುವಾರ ತಡರಾತ್ರಿ ಲೊಕ್ಕನಹಳ್ಳಿ ಹಾಗೂ ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿ ಅತಿ ಹೆಚ್ಚು ನೀರು ಉಕ್ಕಿ ಹರಿಯುತ್ತಿದ್ದರಿಂದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿತ್ತು.
ಈ ಹಿನ್ನೆಲೆ ಭೇಟಿ ನೀಡಿ ತಾತ್ಕಾಲಿಕ ಸೇತುವೆಯನ್ನು ಶೀಘ್ರದಲ್ಲಿಯೇ ದುರಸ್ತಿಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಚಿನ್ನಣ್ಣ ಅವರಿಗೆ ಸೂಚನೆ ನೀಡಿದರು.

ಈ ವೇಳೆ ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್, ಸುದೇಶ್, ಸಂಪತ್, ಸೋಮಶೇಖರ್ ತಹಸೀಲ್ದಾರ್ ಆನಂದಯ್ಯ ಹಾಗೂ ಗ್ರಾಮಸ್ಥರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ