Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಹನೂರು : ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಣೆ

ಹನೂರು:ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದ ಮಿಣ್ಯಂ ಗ್ರಾಮದ ಮಾದಪ್ಪ ಅವರ ಕುಟುಂಬದವರಿಗೆ ಶಾಸಕ ಆರ್. ನರೇಂದ್ರ ಅವರು ಐದು ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.


ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂತ್ರಸ್ತ ಕುಟುಂಬದವರಿಗೆ ಐದು ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಿ, ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಮಿಣ್ಯಂ ಗ್ರಾಮದ ಮಾದಪ್ಪ ಹಾಗೂ ಅವರಿಗೆ ಸೇರಿದ 6 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ಈ ಬಗ್ಗೆ ಸರಕಾರಕ್ಕೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿದ್ದ ಹಿನ್ನೆಲೆಯಲ್ಲಿ ಪರಿಹಾರವನ್ನು ವಿತರಿಸಲಾಗುತ್ತಿದೆ. ಜೊತೆಗೆ ಪಶು ಇಲಾಖೆಯಿಂದ ಕೂಡ 35 ಸಾವಿರ ರೂ.ಗಳ ಪರಿಹಾರ ಧನವನ್ನು ನೀಡಲಾಗುತ್ತಿದೆ. ಸಂತ್ರಸ್ತ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಆನಂದಯ್ಯ, ಗ್ರಾಮಲೆಕ್ಕಿಗ ಶರವಣ ಸೇರಿದಂತೆ ಸಂತ್ರಸ್ತ ಕುಟುಂಬಸ್ಥರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!