Mysore
29
broken clouds

Social Media

ಸೋಮವಾರ, 15 ಜೂನ್ 2026
Light
Dark

ವಿಮಾನ ನಿಲ್ದಾಣದಲ್ಲಿ ‘ನಾಲ್ವಡಿ’ ಹೆಸರಿಗೆ ದೀಪಾಲಂಕಾರ ಮಾಡಿ : ಪ್ರತಾಪ್‌ ಸಿಂಹ ಸಲಹೆ

ಮೈಸೂರು : ನಗರದ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೀಪಾಲಂಕಾರ ಮಾಡಲಾಗುತ್ತಿರುವುದರಿಂದ ವಿಮಾನ ನಿಲ್ದಾಣದ ದ್ವಾರದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ನಿರ್ಮಿಸಿ, ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಹೆಸರು ಬರೆಯಬೇಕೆಂದು ಸಂಸದ ಪ್ರತಾಪಸಿಂಹ ಸಭೆಯಲ್ಲಿ ಸಲಹೆ ನೀಡಿದರು.

ದೀಪಾಲಂಕಾರ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿಸ ಸಂಸದ ಪ್ರತಾಪ್‌ ಸಿಂಹ ಅವರು ಈಗಾಗಲೇ ರಾಜ್ಯ ಸರ್ಕಾರ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರದಿಂದಲೂ ಒಪ್ಪಿಗೆ ದೊರೆಯಲಿದೆ ಈ ಹಿನ್ನೆಲೆಯಲ್ಲಿ ಅಲಂಕಾರ ಮಾಡಿದರೇ ಒಳ್ಳೆಯದು ಎಂದು ಅವರು ತಿಳಿಸಿದ್ದಾರೆ.  ಬನ್ನೂರು ಮತ್ತು ಎಚ್.ಡಿ.ಕೋಟೆ ರಸ್ತೆಗಳಲ್ಲೂ ದೀಪಾಲಂಕಾರ ಮಾಡುವಂತೆ ಸಲಹೆ ನೀಡಿದ ಅವರು, ಚಾಮುಂಡಿಬೆಟ್ಟದ ಮಳಿಗೆಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ನೀಡುವಂತೆ ಸೆಸ್ಕ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪ್ರಪ್ರಥಮ ಬಾರಿಗೆ ದಸರಾ ಉದ್ಘಾಟಿಸಲು ರಾಷ್ಟ್ರಪತಿಗಳು ಆಗಮಿಸುತ್ತಿದ್ದಾರೆ. ಹಾಗಾಗಿ ಬೆಟ್ಟದಲ್ಲಿ ಯಾವುದೇ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದೆಯೇ ಸಂಸದ ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೇ 27 2022 ರಂದು ಪತ್ರದ ಮೂಲಕ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜರ ಹೆಸರನ್ನು ನಾಮಕರಣ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಅವರಿಗೆ ನನ್ನ ಬೇಡಿಕೆಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಒಪ್ಪುಗೆ ನೀಡಿದ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಧನ್ಯವಾದಗಳು ಎಂದು ತಿಳಿಸಿದ್ದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಈ ವಿಚಾರವನ್ನು ಪ್ರಕಟಿಸಿದ್ದರು.
ಪ್ರಜಾಪ್ರಭುತ್ವದ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದ ಅವರ ಹೆಸರನ್ನು ಇತಿಹಾಸದಲ್ಲಿ ಶಾಶ್ವತವಾಗಿಡಲು ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಅಲ್ಲದೆ ಮೈಸೂರು ವಿಮಾನ ನಿಲ್ದಾಣದಲ್ಲಿರುವ ಸುಮಾರು 245 ಎಕರೆ ಜಮೀನನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರಿಸಲು 9.25 ಲಕ್ಷ ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!