Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದೆ. ಆದರೆ ಅದು ಸರಿಯಾಗಿ ನಡೆಯಲಿಲ್ಲ : ಡೆತ್ ನೋಟ್ ಬರೆದಿಟ್ಟು ನಟಿ ಸಾವಿಗೆ ಶರಣು

ಚೆನ್ನೈ :ಇತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಯುವ ನಟಿಯರು ಸಾವಿಗೆ ಶರಣಾಗುತ್ತಿರುವುದು ಚಿತ್ರರಂಗ ವಲಯದಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಕಾಲಿವುಡ್ ಯುವ ನಟಿ ದೀಪಾ ಅಲಿಯಾಸ್ ಪಾಲಿನ್ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಖಾಸಗಿ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ದೀಪಾ ಶನಿವಾರದಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ದೀಪಾ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ನೇಹಿತರು ತಿಳಿಸಿದ್ದಾರೆ. ಶನಿವಾರ ನಟಿ ದೀಪಾ ಕುಟುಂಬಸ್ಥರ ಫೋನ್ ರಿಸೀವ್​​ ಮಾಡಿರಲಿಲ್ಲ. ಬಳಿಕ ಕುಟುಂಬಸ್ಥರು ದೀಪಾ ಅವರ ಸ್ನೇಹಿತ ಪ್ರಭಾಕರನ್​​ ಅವರಿಗೆ ಕರೆ ಮಾಡಿದ್ದಾರೆ. ಪ್ರಭಾಕರನ್ ದೀಪಾ ಅವರ ಮನೆಗೆ ಬಂದು ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೀಪಾ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್​​ ನೋಟ್ ಸಹ ಪತ್ತೆಯಾಗಿದೆ. ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ಜೀವನ ಪರ್ಯಂತ ಅವರನ್ನು ಪ್ರೀತಿಸುತ್ತಲೇ ಇರುತ್ತೇನೆ ಎಂದು ಬರೆದಿದ್ದಾರೆ.

ದೀಪಾರ ಸಹೋದರ ದಿನೇಶ್ ಅವರು ನಿನ್ನೆ(ಸೆ.17) ಕೊಯಂಬೇಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಮೊದಲ ಹಂತದ ವಿಚಾರಣೆಯಲ್ಲಿ ದೀಪಾ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ. “ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದೆ. ಆದರೆ ಅದು ಸರಿಯಾಗಿ ನಡೆಯಲಿಲ್ಲ. ಹಾಗಾಗಿ ನಾನು ಇಹಲೋಕ ತ್ಯಜಿಸುತ್ತಿದ್ದೇನೆ. ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ” ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಾ ಹಲವು ತಮಿಳು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದಾರೆ. ಸಣ್ಣಪುಟ್ಟ ಪಾತ್ರಗಳಲ್ಲಾದರೂ ತನ್ನ ನಟನೆಯಿಂದ ಉತ್ತಮ ಮನ್ನಣೆ ಗಳಿಸಿದ್ದ ಅವರು ನಾಸರ್ ಅಭಿನಯದ ‘ವೈಥಾ’ ಸಿನಿಮಾ ಮೂಲಕ ನಾಯಕಿಯಾಗಿ ಪರಿಚಯಿಸಲ್ಪಟ್ಟರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!