Mysore
26
moderate rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ಮೈಸೂರು : ʼಭಾರತ್ ಜೋಡೊ ಯಾತ್ರೆʼ ಸಮಿತಿ ಅಧ್ಯಕ್ಷರಾಗಿ ಎಚ್.ಸಿ.ಮಹದೇವಪ್ಪ ಆಯ್ಕೆ

ಮೈಸೂರು : ಕಾಂಗ್ರೆಸ್‌ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್‌ ಜೋಡೊ ಯಾತ್ರೆಯು ಇದೇ ತಿಂಗಳ 30ನೇ ತಾರೀಖಿನಂದು ಗುಂಡ್ಲುಪೇಟೆಯ  ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಯಾತ್ರೆಗೆ ಸಂಬಂಧಿಸಿದಂತೆ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ.
ಈ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರನ್ನು ನೇಮಕ ಮಾಡಲಾಗಿದೆ. ಉಳಿದಂತೆ ಸಮಿತಿಯ ಸದಸ್ಯರುಗಳನ್ನಾಗಿ ಮಾಜಿ ಸಚಿವರಾದ ಸುಮಾ ವಸಂತ್,ಶಾಸಕರಾದ ತನ್ವೀರ್ ಸೇಠ್, ಎಚ್.ಪಿ.ಮಂಜುನಾಥ್,ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಜೀವಿಜಯ, ಎಂ.ಸಿ.ನಾಣಯ್ಯ, ಕೆ.ವೆಂಕಟೇಶ್, ವಾಸು, ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಆರ್.ಧರ್ಮಸೇನ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಸಂಸ್ಥೆಯ ಎಚ್.ಎ.ವೆಂಕಟೇಶ್ ರವರನ್ನು ನೇಮಕ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!