Mysore
17
clear sky

Social Media

ಶುಕ್ರವಾರ, 16 ಜನವರಿ 2026
Light
Dark

ಮಹಿಷಾಸುರನ ಪೂಜೆಗೆ ಅವಕಾಶ ನಿರಾಕರಿಸಿದ ಹೈಕೋರ್ಟ್

ಅಧಿಕೃತ ದಾಖಲೆ ಸಲ್ಲಿಸಲು ದೂರುದಾರರಿಗೆ ನ್ಯಾಯಾಲಯ ಸೂಚನೆ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆ ಪೂಜೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್ ನಿರಾಕರಿಸಿದೆ.ದಸರಾ ಹಬ್ಬದ ವೇಳೆ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೂಜೆಗೆ ಅವಕಾಶ ನಿರಾಕರಿಸಿದ್ದು,
ಈ ಸಂಬಂಧ ಹೆಚ್ಚಿನ ವಿವರಣೆಗಾಗಿಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ತುರ್ತು ನೋಟಿಸ್ ನೀಡಿದೆ.

ಮೈಸೂರಿನ ಅಶೋಕಪುರಂನ ವಕೀಲ ಪಿ.ಚಂದ್ರಶೇಖರ್ ಸಲ್ಲಿಸಿದ್ದ ಅವರು ಪೂಜೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.
ಅಲ್ಲದೇ ಮಹಿಷಾಸುರನ ಪ್ರತಿಮೆಗೆ ಅಗ್ರಪೂಜೆ ಸಲ್ಲಿಸಲು ಅಡ್ಡಿಪಡಿಸಲಾಗುತ್ತಿದೆ. ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಮೈಸೂರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.
ಅರ್ಜಿದಾರರ ಮಧ್ಯಂತರ ಮನವಿಯನ್ನು ಸಾರಾಸಗಟಾಗಿ ಹೈಕೋರ್ಟ್ ತಳ್ಳಿ ಹಾಕಿದೆ.
ಮಹಿಷ ಪ್ರತಿಮೆಗೆ ಪೂಜೆ ಮಾಡಿದ ನಂತರ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಗ್ಗೆ ಯಾವುದಾದರೂ ವಿವರಗಳಿದ್ದರೆ ಸಲ್ಲಿಸಲು ಪೀಠ ಸೂಚನೆ ನೀಡಿತು. ಜತೆಗೆ ಅಧಿಕೃತ ಮತ್ತು ಪರಿಗಣನಾರ್ಹ ವಿವರಗಳು ಲಭ್ಯವಿದ್ದರೆ ಅವುಗಳನ್ನು ಕೋರ್ಟ್‌ಗೆ ಹಾಜರುಪಡಿಸಿ ಎಂದು ಅರ್ಜಿದಾರರ ಪರ ವಕೀಲ ಅಬೂಬಕರ್ ಶಫಿ ಅವರಿಗೆ ಸೂಚನೆ ನೀಡಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!