Mysore
21
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಕೊಡಗು : ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ.
ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಕೊನೆಯುಸಿರೆಳೆದಿದ್ದಾರೆ‌.
ಬೊಮ್ಮಾಡು ಹಾಡಿ ನಿವಾಸಿ ದಾಸ (೫೩) ಮೃತರಾದವರು.
ಮುಂಜಾನೆ ಹಾಡಿ ಸಮೀಪ ಹಸುವಿನ ಮೇಲೆ ಮೊದಲು ಹುಲಿ ದಾಳಿ ಮಾಡಿತ್ತು. ನಂತರ ಮಧ್ಯಾಹ್ನ ಮತ್ತೆ ಬಂದ ಹುಲಿ ದಾಸ ಎಂಬುವವರ ಮೇಲೆ ದಾಳಿ ಮಾಡಿದೆ. ಇದರಿಂದ ಗಂಭೀರ ಗಾಯಗೊಂಡ ದಾಸನನ್ನು ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುವಾಗ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ನಂತರ ಶವ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.
ನಾಗರಹೊಳೆ ಉದ್ಯಾನವನಕ್ಕೆ ಹೊಂದಿಕೊಂಡಿರುವ ಗ್ರಾಮವಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!