Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಫಲಪುಷ್ಪ ಪ್ರದರ್ಶನ : ಸಚಿವ ಎಸ್‌. ಟಿ. ಸೋಮಶೇಖರ್‌ ಅವರಿಂದ ಪೂರ್ವ ಸಿದ್ದತೆ ವೀಕ್ಷಣೆ

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು.
ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.
7ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು ಎಂದರು. ಇತರ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್ ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗುವುದು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!