Mysore
15
scattered clouds

Social Media

ಶನಿವಾರ, 17 ಜನವರಿ 2026
Light
Dark

ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಚಾಮುಂಡಿಬೆಟ್ಟ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್

ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.
೨೬ರಂದು ಬೆಳಿಗ್ಗೆ ೫.೫೦ಕ್ಕೆ ರಾಷ್ಟ್ರಪತಿ ಭವನದಿಂದ ಹೊರಟು ೬.೦೫ಕ್ಕೆ ಪಾಲಂ ವಿಮಾನ ನಿಲ್ದಾಣ ತಲುಪಲಿದ್ದಾರೆ. ೬.೧೫ಕ್ಕೆ ಹೊರಟು ೯ ಗಂಟಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ೯.೧೦ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ೯.೩೦ಕ್ಕೆ ಚಾಮುಂಡೇಶ್ವರಿ ದೇವಸ್ಥಾನ ತಲುಪಲಿದ್ದಾರೆ. ನಂತರ, ೨೦ ನಿಮಿಷಗಳ ಕಾಲ ಚಾಮುಂಡೇಶ್ವರಿ ದೇವಾಲಯದಲ್ಲಿ ಇರಲ್ಲಿದ್ದಾರೆ. ೯.೫೦ಕ್ಕೆ ದೇವಸ್ಥಾನದಿಂದ ಹೊರಟು ೯.೫೫ಕ್ಕೆ ವೇದಿಕೆಯನ್ನೇರಲಿದ್ದಾರೆ. ೧೦ರಿಂದ ೧೦.೪೫ರ ವೇಳೆ ನಾಡಹಬ್ಬಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿಗಳು ೪೫ ನಿಮಿಷಗಳ ಕಾಲ ಸಮಾರಂಭದಲ್ಲಿ ಹಾಜರಿರುತ್ತಾರೆ. ೧೦.೪೫ಕ್ಕೆ ಚಾಮುಂಡಿಬೆಟ್ಟದಿಂದ ಹೊರಟು ೧೧.೦೫ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ಸ್ವೀಕರಿಸಿ ೧೧.೧೫ಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!