Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಗುಂಡ್ಲುಪೇಟೆ; ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ‘ ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ‌ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ’ ಎಂದರು.

‘ದೇಶವನ್ನು ಧರ್ಮ, ಜಾತಿ ಆಧಾರದಲ್ಲಿ ವಿಭಜಿಸಬೇಕು ಎಂಬುದು ಅವರ ಉದ್ದೇಶ. ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಪ್ರಜಾಪ್ರಭುತ್ವ, ದೇಶದ ಸಂವಿಧಾನ ರಕ್ಷಣೆಗಾಗಿ ನಾವು ಎಲ್ಲ ತ್ಯಾಗಗಳಿಗೂ ಸಿದ್ಧರಾಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಮಾಡುತ್ತಿರುವ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು’ ಎಂದರು.

ಸಾವಿರಾರು‌ ಜನರು ಭಾಗಿ: ರಾಜ್ಯ ಪ್ರವೇಶಿಸಿದ ಪಾದಯಾತ್ರೆ ಯ ಮೊದಲ ದಿನ ಸಾವಿರಾರು ಜನರು ಭಾಗಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ‌ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಂದ ಮಾತ್ರವಲ್ಲದೇ ರಾಜ್ಯದಾದ್ಯಂತ ಕಾರ್ಯಕರ್ತರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!