Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಭಾರತ್ ಜೋಡೊ ಯಾತ್ರೆಗೆ ‘ದೇಮ’ ಬೆಂಬಲ

ಗುಂಡ್ಲುಪೇಟೆ: ಭಾರತ ಐಕ್ಯತಾ ಯಾತ್ರೆಗೆ ಸಾಹಿತಿ ದೇವನೂರು ಮಹಾದೇವ ಬೆಂಬಲ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭಾರತೀಯ ಸಂವಿಧಾನ ಪುಸ್ತಕ ಹಾಗೂ ಪೀಠಿಕೆ ಪ್ರತಿ ಉಡುಗೊರೆಯಾಗಿ ನೀಡಿದರು.
ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶ ಮಾಡಿದ್ದು, ಚಿಂತಕ ಮತ್ತು ಸಾಹಿತಿ ದೇವನೂರು ಮಹಾದೇವ ಐಕ್ಯತಾ ಯಾತ್ರೆಗೆ ಬೆಂಬಲ ಕೊಟ್ಟಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ದೇವನೂರು ಮಹಾದೇವ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭಾರತೀಯ ಸಂವಿಧಾನ ಪುಸ್ತಕ ಹಾಗೂ ಪೀಠಿಕೆ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!