ಮೈಸೂರು : ನಗರದ ವಿಮಾನ ನಿಲ್ದಾಣದಲ್ಲಿ ಇಂದು ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಮೈಸೂರಿನ ಪ್ರಾದೇಶಿಕ ನೈಸರ್ಗಿಕ ಇತಿಹಾಸ ಸಂಗ್ರಹಾಲಯದ ಅಧಿಕಾರಿಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನಡೆಸುವ ಮೂಲಕ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುತ್ತ ಸ್ವಚ್ಛತಾ ಕಾರ್ಯವನ್ನು ಆರಂಭಿಸಿದ ಅಧಿಕಾರಿಗಳು ಎಲ್ಲಾ ಸಮಯದಲ್ಲೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಈ ಮೂಲಕ ಸಂಪೂರ್ಣ ಸ್ವಚ್ಛತೆಯ ಗುರಿಯನ್ನು ಸಾಧಿಸಬೇಕು ಎಂದು ಪ್ರತಿಜ್ಞೆ ಮಾಡಿದರು.
ಮೈಸೂರಿನ ವನ್ಯ ಜೀವಿ ವಸ್ತು ಸಂಗ್ರಹಾಲಯದ ಬಗ್ಗೆ ಪ್ರಮುಖ ಮಾಹಿತಿಯನ್ನು ಪ್ರದರ್ಶಿಸುವಂತಹ ವಸ್ತು ಪ್ರದರ್ಶನ ವನ್ನು ಮೊದಲ ಬಾರಿಗೆ ನಿಲ್ದಾಣದಲ್ಲಿ ಉದ್ಘಾಟಿಸಲಾಯಿತು.
ಮೈಸೂರು ಮತ್ತು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಇವುಗಳು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಪ್ರದರ್ಶನದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.