Mysore
22
overcast clouds

Social Media

ಬುಧವಾರ, 01 ಜುಲೈ 2026
Light
Dark

ದಸರೆ ಯಶಸ್ಸಿಗಾಗಿ ಮೈಸೂರು ಬಿಟ್ಟು ಕದಲದ ಎಸ್ ಟಿಎಸ್

ಮೈಸೂರು : ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಣೆ ಮಾಡಲಾಗಿದ್ದ ದಸರಾ ಮಹೋತ್ಸವ ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಗ್ರಾಮೀಣ ದಸರಾ, ಮಹಿಳಾ ಮತ್ತು ಮಕ್ಕಳ ದಸರಾ, ಕವಿಗೋಷ್ಠಿ, ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜನಸಾಗರ ಹರಿದು ಬರುತ್ತಿದೆ. ಆಹಾರ ಮೇಳದಲ್ಲಿ 11 ಗಂಟೆಯಾದರೂ ಜನದಟ್ಟಣೆಯಿಂದ ಕೂಡಿದೆ.

ಲಕ್ಷಾಂತರ ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದ್ದು ಎಲ್ಲವೂ ಬಹಳ ಅಚ್ಚುಕಟ್ಟಾಗಿ ನೆರವೇರುತ್ತಿರುವುದರ ಹಿಂದೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಕಾರ್ಯಕ್ಷಮತೆ, ಪೂರ್ವಸಿದ್ಧತೆಗಳ ಜೊತೆಗೆ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುತ್ತಿರುವ ಗುಣವೇ ಕಾರಣ ಎನ್ನಲಾಗುತ್ತಿದೆ.

ನವರಾತ್ರಿ ಆರಂಭಕ್ಕೂ ಮುನ್ನವೇ ಮೈಸೂರಿಗೆ ಆಗಮಿಸಿದ ಸಚಿವ ಸೋಮಶೇಖರ್ ಅವರೇ ಖುದ್ದು ಮುತುವರ್ಜಿ ವಹಿಸಿಸುತ್ತಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳನ್ನು ಒಟ್ಟಿಗೆ ಕರೆದೊಯ್ಯುತ್ತಿರುವುದರ ಫಲವಾಗಿ ದಸರಾ ಕಾರ್ಯಕ್ರಮಗಳು ಸುಸೂತ್ರವಾಗಿ ಸಾಗುತ್ತಿವೆ.

ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಷ್ಟೇ ಅಲ್ಲದೆ ಯಾವುದೇ ಸಮಸ್ಯೆಯಾದರೆ ಸ್ಥಳದಲ್ಲೇ ಬಗೆಹರಿಸಿ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಆಹಾರಮೇಳಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಸ್ವಚ್ಛತೆಯ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ರಾತ್ರಿವೇಳೆ ನಗರ ಸಂಚಾರ ಮಾಡಿ ವಸ್ತುಸ್ಥಿತಿ ಅವಲೋಕಿಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ದಸರಾದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜೊತೆಗೆ ದಸರಾ ಮುಕ್ತಾಯವಾಗುವವರೆಗೂ ಮೈಸೂರಿನಲ್ಲಿ ಬೀಡುಬಿಟ್ಟಿದ್ದ ಸಚಿವರು ಸೋಮಶೇಖರ್ ಮಾತ್ರ. ಯಾರು ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಿದರು ಇಲ್ಲ ಎನ್ನದೆ ಹಾಜರಾಗುವುದರ ಜೊತೆಗೆ ಜನಸಾಮಾನ್ಯರೊಂದಿಗೆ ದಸರಾದ ಬಗ್ಗೆ ಮಾಹಿತಿ ಕೂಡ ತೆಗೆದುಕೊಳ್ಳುತ್ತಿದ್ದಾರೆ.

12 ದಿನಗಳ ಕಾಲ ಮೈಸೂರಿನಲ್ಲಿ ನೆಲೆನಿಂತು ದಸರಾ ಮಹೋತ್ಸವಕ್ಕೆ ತಮ್ಮನ್ನು ತಾವೇ ತೊಡಗಿಸಿಕೊಂಡಿರುವ ಏಕೈಕ ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಅದು ಸೋಮಶೇಖರ್ ಮಾತ್ರ ಎಂಬ ಮಾತುಗಳು ಈಗ ಜಿಲ್ಲೆಯ ಎಲ್ಲೆಡೆ ಕೇಳಿಬರುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!