ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟೃೈಲರ್ ಇಂದು ಬೆಳಿಗ್ಗೆ ಬಿಡುಗಡೆಯಾಗಿದ್ದು,

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 1,840,441 ವೀಕ್ಷಣೆಗಳನ್ನು ಹಾಗೂ 326 ಸಾವಿರ ಲೈಕ್ ಗಳನ್ನು ಪಡೆದುಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ದೊಡ್ಡಪರದೆಯಲ್ಲಿ ಕಾಣಿಸಿಕೊಳ್ಳುವ ಮೊದಲೇ ಸಾಕಷ್ಟು ಮೆಚ್ಚುಗೆಯನ್ನು ಪಡೆದುಕೊಂಡಿದೆ.
ಜೆ.ಎಸ್ ಅಮೋಘವರ್ಷ ಆ್ಯಕ್ಷನ್ ಕಟ್ ಹೇಳುವ ಜೊತೆಗೆ ನಟನೆ ಕೂಡ ಮಾಡಿದ್ದಾರೆ. ಪ್ರತೀಕ್ ಶೆಟ್ಟಿ ಕ್ಯಾಮರಾ ಕೈಚಳಕಕ್ಕೆ ಸಿನಿಪ್ರಿಯರು ಮನಸೋತಿದ್ದಾರೆ. ಬಿ ಅಜನೀಶ್ ಲೋಕನಾಥ್ ಸಂಗೀತವಿದ್ದು, ಪಿಆರ್ಕ್ ಪ್ರೊಡಕ್ಷನ್ ಹೌಸ್ ಅಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೇ 28ರಂದು ಸಿನಿಮಾ ಎಲ್ಲೆಡೆ ತೆರೆಕಾಣಲಿದೆ.
1,840,441 views 326 like





