Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಆಸ್ಟ್ರೇಲಿಯಾ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆ

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತವಾಗಿದೆ. ಏಕೆಂದರೆ ಕಳೆದ ತಿಂಗಳಷ್ಟೇ ಪಸ್ತುತ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಏಕದಿನ ತಂಡಕ್ಕೆ ಹೊಸ ನಾಯಕನ ಆಯ್ಕೆ ಮಾಡಬೇಕಾದ ಅನಿವಾರ್ಯತೆಯಿದೆ. ಇತ್ತ ಆರೋನ್ ಫಿಂಚ್ ಟಿ20 ವಿಶ್ವಕಪ್ ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡವು ಏಕದಿನ ಹಾಗೂ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡುವುದು ಖಚಿತ.

ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ಡೇವಿಡ್ ವಾರ್ನರ್​ಗೆ ವಿಧಿಸಲಾಗಿದ್ದ ಅಜೀವ ನಾಯಕತ್ವ ನಿಷೇಧವನ್ನು ತೆಗೆದು ಹಾಕಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ನ ನಿರ್ದೇಶಕರು ಚಿಂತನೆ ನಡೆಸಿದ್ದಾರೆ. 2018 ರ ಬಾಲ್ ಟ್ಯಾಂಪರಿಂಗ್ ಪ್ರಕರಣದ ಬಳಿಕ ವಾರ್ನರ್ ನಾಯಕತ್ವಕ್ಕೆ ಆಜೀವ ನಿಷೇಧ ಹೇರಲಾಗಿತ್ತು. ಇದೀಗ ಹೊಸ ನಾಯಕನ ಹುಡುಕಾಟದಲ್ಲಿರುವ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿರುವ ಉತ್ತಮ ಆಯ್ಕೆಯೆಂದರೆ ಡೇವಿಡ್ ವಾರ್ನರ್.

ಹಾಗಾಗಿ ವಾರ್ನರ್ ಅವರ ನಾಯಕತ್ವ ನಿಷೇಧವನ್ನು ತೆಗೆದುಹಾಕಲು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಚಿಂತಿಸಿದೆ. ಈ ನಿಷೇಧವನ್ನು ತೆಗೆದುಹಾಕಲು ಕ್ರಿಕೆಟ್ ಆಸ್ಟ್ರೇಲಿಯಾ ಕೆಲ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ. ಶುಕ್ರವಾರ ಹೋಬರ್ಟ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ದೇಶಕರು ಈ ಬಗ್ಗೆ ಮಾತನಾಡಲಿದ್ದಾರೆ. ಸಿಎ ಅಧ್ಯಕ್ಷ ಲಾಚ್ಲಾನ್ ಹೆಂಡರ್ಸನ್ ಅವರನ್ನು ಉಲ್ಲೇಖಿಸಿ ವರದಿಯು ಅಗತ್ಯವಿದ್ದಲ್ಲಿ ನಿಯಮಗಳನ್ನು ಬದಲಾಯಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ ಡೇವಿಡ್ ವಾರ್ನರ್​ ಅವರಿಗೆ ನಾಯಕತ್ವ ಒಲಿಯುವುದು ಬಹುತೇಕ ಖಚಿತವಾಗಿದೆ.

2023 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಹೀಗಾಗಿ ಅನುಭವಿ ಆಟಗಾರನಿಗೆ ನಾಯಕತ್ವ ನೀಡಲು ಕ್ರಿಕೆಟ್ ಆಸ್ಟ್ರೇಲಿಯಾ ಬಯಸಿದೆ. ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಹೆಸರು ಮುಂಚೂಣಿಯಲ್ಲಿದ್ದು, ಇದಾಗ್ಯೂ ಅವರ ಮೇಲೆ ನಿಷೇಧ ತೊಡಕಾಗಿದೆ. ಹೀಗಾಗಿ ಈ ನಿಷೇಧವನ್ನು ತೆಗೆದು ಹಾಕಲು ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಸಭೆ ಕರೆದಿದೆ. ಈ ವೇಳೆ ಒಮ್ಮತ ಮೂಡಿದರೆ ಡೇವಿಡ್ ವಾರ್ನರ್ ಅವರನ್ನು ಮುಂದಿನ ನಾಯಕನಾಗಿ ಆಯ್ಕೆ ಮಾಡಲಿದೆ.

ಇನ್ನು ನಾಯಕತ್ವದ ರೇಸ್​ನಲ್ಲಿರುವ ಇತರೆ ಆಟಗಾರೆಂದರೆ ಆಸ್ಟ್ರೇಲಿಯಾ ಟೆಸ್ಟ್ ತಂಡದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಹಾಗೂ ಆಲ್​ರೌಂಡರ್ ಮಿಷೆಲ್ ಮಾರ್ಷ್​. ಆದರೆ ಡೇವಿಡ್ ವಾರ್ನರ್ ಅವರ ಅನುಭವದ ಮುಂದೆ ಈ ಇಬ್ಬರು ಆಟಗಾರರು ಹಿಂದೆ ಉಳಿಯಲಿದ್ದಾರೆ. ಹೀಗಾಗಿಯೇ ಡೇವಿಡ್ ವಾರ್ನರ್ ಅವರಿಗೆ ಕ್ಯಾಪ್ಟನ್ ಪಟ್ಟ ದೊರೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡ:

ಆರೋನ್ ಫಿಂಚ್ (ನಾಯಕ), ಪ್ಯಾಟ್ ಕಮ್ಮಿನ್ಸ್ (ಉಪನಾಯಕ), ಆಷ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್. ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್ ಮತ್ತು ಆ್ಯಡಂ ಝಂಪಾ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ