ಬೆಂಗಳೂರು : ಕಳೆದ ಎರಡು ವಾರಗಳಲ್ಲಿ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.
ಕಳೆದ ಎರಡು ವಾರಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಬಿಡುವು ಕೊಟ್ಟಿದ್ದು, ಆದರೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆ ಮುಂದುವರೆದಿದೆ.
ಸೆ.29, 30ರಿಂದ ಇನ್ನೊಂದು ಸುತ್ತಿನ ಮಳೆಯಾಗಲಿದ್ದು, ಆ ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮುಂಗಾರು ಮಳೆ ಅಕ್ಟೋಬರ್ 2ನೇ ವಾರದ ನಂತರ ಮರಳುವಿಕೆ ಪ್ರಕ್ರಿಯೆ ಶುರುವಾಗಲಿದ್ದು, ಆ ಸಂದರ್ಭದಲ್ಲೂ ರಾಜ್ಯದಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷಿಸಬಹುದಾಗಿದೆ.
ಮುಂಗಾರು ಮರಳಿದ ನಂತರ ಈಶಾನ್ಯ ಹಿಂಗಾರು ಪ್ರಾರಂಭದ ಪ್ರಕ್ರಿಯೆಗಳು ಶುರುವಾಗಲಿದೆ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕೈ ನಡೆಸುತ್ತಿರುವ paycm ಅಭಿಯಾನಕ್ಕೆ ಟಕ್ಕರ್ ಕೊಡಲು ಇದೀಗ ಕಮಲವೂ ಸಿದ್ದ!
Next Article ರಾಮಕೃಷ್ಣ ಆಶ್ರಮಕ್ಕೆ ಸಿಎಂ ಬೊಮ್ಮಾಯಿ ಭೇಟಿ