ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ ಚೆಲುವ ನಾರಾಯಣಸ್ವಾಮಿ ಅವರು ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟ್ರಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 236 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯನ್ವಯ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ರೂ.4663.12 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನವನ್ನು ನಿರೀಕ್ಷಿಸಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ ಪರಿಹಾರದ ಮೊಲದನೇ ಕಂತಾಗಿ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ 2000 ರೂ. ರೈತರಿಗೆ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆಯಾಗಿದೆ. ಈಲ್ಲೆ ಆರೂ ತಾಲೂಕುಗಳಲ್ಲಿ ಸುಮಾರು 219.87 ಕೋಟಿ ರೂ.ನಷ್ಟವಾಗಿದೆ. ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟವನ್ನು ಅಂದಾಜು ಮಾಡಿದ್ದಾರೆ. ಬೇಸಿಗೆಯ ಬಗ್ಗೆ ಭೀತಿ ಮೂಡಿದೆ ಎಂದು ಇದೆ ವೇಳೆ ಗೋವಿಂದರಾಜು ಅವರು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಗೋಪನೆ ಇಲಾಖೇಯ ವರದಿಯನುಸಾರ ಕೋಲಾರ ಜಿಲ್ಲೆಯಲ್ಲಿ 2.23 ಲಕ್ಷ ಟನ್ ಮೇವು ಲಭ್ಯವಿದೆ. ಎಸ್‌ಡಿಆರ್‌ಎಫ್ ಅಡಿಯಲ್ಲಿ ಮೇವಿನ ಕಿರು ಪೊಟ್ಟಣಗಳನ್ನು ನಿಯಮಾನುಸಾರ ಖರೀದಿಸಲು 20 ಕೋಟಿ ರೂ. ಗಳನ್ನು ಪಶು ಸಂಗೋಪನೆ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ. 31 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ಪೈಕಿ ಕೋಲಾರ ಜಿಲ್ಲೆಗೆ 9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈಲ್ಲೆಯ 4 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…