ಕೃಷಿ

ಎಲೆ ಚುಕ್ಕೆ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಆರಗ ಜ್ಞಾನೇಂದ್ರ ಸ್ವಾಗತ

ಬೆಂಗಳೂರು: ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿ ರಚನೆ ನಿರ್ಧಾರವನ್ನು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಆಶಿಸಿದ್ದಾರೆ.

ಕಳೆದ ವಾರವಷ್ಟೇ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಕೋರಿ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆಗೆ ಹರಡುತ್ತಿದೆ ಎಂದು ಸಚಿವರು, ಆತಂಕ ವ್ಯಕ್ತಪಡಿಸಿದರು.

ಸರಿವಸುಮಾರು ಐವತ್ತು ಲಕ್ಷ ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದರು.

andolanait

Share
Published by
andolanait

Recent Posts

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…

9 seconds ago

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

18 mins ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

50 mins ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

5 hours ago