ಚೆನ್ನೈ: ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ. ಚಂಡಮಾರುತದ ಪರಿಣಾಮ ಡಿಸೆಂಬರ್ 12ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ 11 ಹಾಗೂ 12ರಂದು ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚಿನ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕರ್ನಾಟಕದ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…
ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು,…
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…