Mysore
26
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಚಾ.ನಗರ, ಮಂಡ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ : ಮತ್ತೆ 3 ದಿನ ಮಳೆ ಸಾಧ್ಯತೆ

ಬೆಂಗಳೂರು– ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆ ಇನ್ನೂ ಮೂರು ದಿನಗಳ ಕಾಳ ಮುಂದುವರೆಯಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಒಂದೇ ಸಮನೆ ಸುರಿಯುತ್ತಿದೆ. ಉಷ್ಣಾಂಶ ಕುಸಿದಿದ್ದು 16 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ, ಸಿಲಿಕಾನ್ ಸಿಟಿಯ ಭಾಗಗಳಲ್ಲಿ ಮಳೆ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ 24 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ:ಮಾಂಡೌಸ್​ ಚಂಡಮಾರುತಕ್ಕೆ 5 ಮಂದಿ ಬಲಿ; 10 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತಮುಂದಿನ 48 ಗಂಟೆಗಳಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.
ಗಂಟೆಗೆ 65 ರಿಂದ 75 ಕಿ.ಮೀ ವೇಗದಲ್ಲಿ ಬೀಸಲಿರುವ ಗಾಳಿ: ರಾಜ್ಯದಲ್ಲಿ ಮೋಡ ಕವಿದ ವಾತಾವರಣವೇ ಇರಲಿದೆ. ಗಂಟೆಗೆ 65ರಿಂದ 75 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಸೋಮವಾರದವರೆಗೆ (ಡಿಸೆಂಬರ್ 12) ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತವು ದುರ್ಬಲಗೊಂಡು ವಾಯುಭಾರ ಕುಸಿತವಾಗಿ ಮಾರ್ಪಟ್ಟಿದ್ದು, ಅದರ ಪ್ರಭಾವವು ಇಳಿಮುಖವಾಗತೊಡಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಅಧಿಕ ಪ್ರಮಾಣ ಮಳೆಯಾದ ವರದಿಯಾಗಿದೆ.
ಶುಕ್ರವಾರದಿಂದಲೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಗರ ಪ್ರದೇಶದ ಜನರು ಮೈಕೊರೆಯುವ ಚಳಿಯಿಂದಾಗಿ ಬಹುತೇಕರು ಮನೆ ಬಿಟ್ಟು ಹೊರಬಂದಿಲ್ಲ.
ಆದರೆ, ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರು, ರೈನ್ಕೋಟ್, ಜರ್ಕಿನ್, ಕೊಡೆಗಳನ್ನು ಆಶ್ರಯಿಸಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ಮುಂಗಾರು ಹಂಗಾಮಿನ ಭತ್ತ, ರಾಗಿ, ಹತ್ತಿ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಕೊಯ್ಲಿನ ಸಮಯವಾಗಿರುವುದರಿಂದ ಜಿಟಿಜಿಟಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾದ ವರದಿಯಾಗಿದೆ. ಉತ್ತರ ಒಳನಾಡಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ತಂಪಾದ ಗಾಳಿ ಬೀಸುವುದು ಹಾಗೂ ತುಂತುರು ಮಳೆಯಿಂದ ತೀವ್ರ ಚಳಿಯ ವಾತಾವರಣ ನಿರ್ಮಾಣವಾಗಿದೆ.
ಇನ್ನೂ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ.ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ 10ರಿಂದ 20 ಮಿ.ಮೀ.ನಷ್ಟು ಮಳೆಯಾಗುವ ಸಾಧ್ಯತೆಗಳಿವೆ.
ತುಮಕೂರು ಭಾಗದಲ್ಲಿ 30ರಿಂದ 40 ಮಿ.ಮೀ.ನಷ್ಟು, ಮಲೆನಾಡಿನಲ್ಲಿ 10ರಿಂದ 35 ಮಿ.ಮೀ.ನಷ್ಟು, ಕರಾವಳಿ ಭಾಗದಲ್ಲಿ 10ರಿಂದ 20 ಮಿ.ಮೀ.ನಷ್ಟು ಹಾಗೂ ಉತ್ತರ ಒಳನಾಡಿನಲ್ಲಿ 3ರಿಂದ 5 ಮಿ.ಮೀ.ನಷ್ಟು, ಮಳೆಯಾಗುವ ಸಾಧ್ಯೆಗಳಿವೆ.
ಬಳ್ಳಾರಿ ಸುತ್ತಮುತ್ತ 15ರಿಂದ 20 ಮಿ.ಮೀ.ನಷ್ಟು ಮಳೆಯಾಗುವ ಸಂಭವವಿದೆ ಎಂದು ಹೇಳಿದರು.
ಮುಂದಿನ ಮೂರು ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗಲಿದೆ. ಉತ್ತರ ಕರ್ನಾಟಕ ಬಾಗಲಕೋಟೆ, ವಿಜಾಪುರ ಜಿಲ್ಲೆಗಳಲ್ಲಿ 10 ಮಿ.ಮೀ.ನಷ್ಟು ಮಳೆಯಾಗಲಿದೆ.
ಮಲೆನಾಡಿನಲ್ಲಿ 60ರಿಂದ 80 ಮಿ.ಮೀ.ನಷ್ಟು, ಕರಾವಳಿಯಲ್ಲಿ 35ರಿಂದ 80 ಮಿ.ಮೀ.ನಷ್ಟು, ಬೆಂಗಳೂರಿನಲ್ಲಿ 20 ಮಿ.ಮೀ.ನಷ್ಟು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲೂ 50 ಮಿ.ಮೀ.ನಷ್ಟು ಮಳೆಯಾಗಲಿದೆ. ಬುಧವಾರ ನಂತರ ಮಳೆ ಬಿಡುವು ಕೊಡಲಿದ್ದು, ಬಿಸಿಲಿನ ವಾತಾವರಣ ನಿರೀಕ್ಷಿಸಬಹುದಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!