ಕೃಷಿ

ಮನೆ ಬಾಗಿಲಿಗೆ ಪೌತಿಖಾತೆ ಹಕ್ಕು: ಆರ್.ಅಶೋಕ್

ಪೌತಿ ಖಾತೆದಾರರಿಗೆ ಕಿಸಾನ್ ಸಮ್ಮಾನ್‌  ಆರ್ಥಿಕ ಸೌಲಭ್ಯಗಳು

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್‌  ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು,
ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ ಎಂದರು.

ಯಾವುದೇ ಅನಗತ್ಯ ತಂಟೆ, ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದು ಹೇಳಿದರು.

ಪೌತಿಖಾತೆಗೆ ಅರ್ಜಿ ಸಲ್ಲಿಸಿದ್ದ 17 ಕುಟುಂಬಗಳಿಗೆ ಸಚಿವರು ಆಸ್ತಿಖಾತೆ ದಾಖಲೆಗಳನ್ನು ವಿತರಿಸಿದರು. ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

28 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago