ಮೈಸೂರು ಸುತ್ತಮುತ್ತಲು ಮೋಡಕವಿದ ವಾತಾವರಣ
ಮೈಸೂರು: ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ನ.೫ರಿಂದ ಐದು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು ಜಿಲ್ಲೆಯಲ್ಲಿ ನ.೫ ರಿಂದ ೯ರವರೆಗೆ ಗರಿಷ್ಠ ೨೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೨೦ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದ್ದು, ಕೊಡಗು ಜಿಲ್ಲೆಯಲ್ಲಿ ಗರಿಷ್ಠ ೨೬ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೧೯ ಡಿಗ್ರಿ ಸೆಲ್ಸಿಯಸ್. ಮಂಡ್ಯ ಜಿಲ್ಲೆಯಲ್ಲಿ ಗರಿಷ್ಠ ೨೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೨೦ ಡಿಗ್ರಿ ಸೆಲ್ಸಿಯಸ್. ಚಾಮರಾಜ ನಗರದಲ್ಲಿ ಗರಿಷ್ಠ ೨೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೨೦ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ.ಪ್ರಕಾಶ್ ತಿಳಿಸಿದ್ದಾರೆ.





