ಬೆಂಗಳೂರು : ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 29 ರ ವರೆಗೆ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅನ್ನಭಾಗ್ಯದ ಸಿದ್ದರಾಮಯ್ಯ ಎಂಬ ಹೆಸರು ರಾಜ್ಯಾದ್ಯಂತ ಬಹು ದೊಡ್ಡ ಹೆಸರು ಮಾಡಿರುವಾಗ ಚೋಟುದ್ದ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರೇಕೆ? ಅದಕ್ಕೆ…
ದುಬಾರಿ ಆಗಿದೆ ಭಾನುವಾರದಿಂದ ಬಸ್ ಪ್ರಯಾಣ, ಅದಕ್ಕೆ ಪುರುಷರು ಹೇಳುವ ಒಂದು ಕಾರಣ, ಸ್ತ್ರೀಯರಿಗೆ ನೀಡಿರುವ ಫ್ರೀ. . .…
ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ…
ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ…
ಡಾ. ದುಷ್ಯಂತ್ ಪಿ. ಆರೋಗ್ಯಕರ ವೃದ್ಧಾಪ್ಯ (Heakthy Aging) ಇತ್ತೀಚಿನ ದಿನಗಳಲ್ಲಿ ಪ್ರಚಲಿತದಲ್ಲಿರುವ ಒಂದು ಪರಿಕಲ್ಪನೆ. ವೃದ್ಧಾಪ್ಯದೆಡೆಗೆ ಸಾಗುವಾಗ ಹಲವು…
ಕೆ. ಬಿ. ರಮೇಶನಾಯಕ ಮೈಸೂರು: ಮುಡಾದಿಂದ ಖಾತೆಯಾಗದೆ ಹಲವು ತಿಂಗಳುಗಳಿಂದ ಅಸಹಾಯಕರಾಗಿ ಕುಳಿತಿದ್ದ ಖಾಸಗಿ ಬಡಾವಣೆಗಳ ನಿವೇಶನದಾರರಿಗೆ ಕೊನೆಗೂ ಖಾತೆ…