ಕೃಷಿ

ರಸ್ತೆಯಲ್ಲಿ ಅಡ್ಡಾಡುವ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಬಿಡಿ : ಪ್ರಭು ಬಿ.ಚವ್ಹಾಣ್ ಮನವಿ

ಬೆಂಗಳೂರು- ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆಯಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಬಿಡಾಡಿ ದನಗಳನ್ನು ನಿಯಂತ್ರಿಸುವ ಸಲುವಾಗಿ ಅವುಗಳನ್ನು ರಕ್ಷಣೆ ಮಾಡಿ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವಂತೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಸ್ಥಳೀಯ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಹೋಬಳಿ ಕೇಂದ್ರಗಳು, ಗ್ರಾಮ ಪಂಚಾಯತ್ ಪ್ರದೇಶ ಸೇರಿದಂತೆ ಪ್ರಮುಖ ಪಟ್ಟಣಗಳ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳು ನಿತ್ಯ ಕಂಡು ಬರುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬರುತ್ತಿರುವುದರಿಂದ ಬಿಡಾಡಿ ದನಗಳಿಗೆ ಕಡಿವಾಣ ಹಾಕಲು ಸ್ಥಳೀಯ ಸಂಸ್ಥೆಗಳು ಮುಂದಾಗಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 74000ಕ್ಕೂ ಹೆಚ್ಚು ಬಿಡಾಡಿ ದನಗಳಿವೆ ಎಂದು ನಗರಾಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಸ್ತೆ ಮೇಲೆ ದನಗಳನ್ನು ಬಿಡುವ ಮಾಲೀಕರನ್ನು ಗುರುತಿಸಿ ಎಚ್ಚರಿಕೆ ನೀಡಲಾಗಿದೆಯಾದರೂ ಬಿಡಾಡಿ ದನಗಳು ಮತ್ತು ಎಮ್ಮೆಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕ ಪರಿಸರದಲ್ಲಿ ಅಲೆದಾಡುತ್ತಿವೆ ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದಾಗಿರುತ್ತದೆ ಎಂದು ಪ್ರಭು ಬಿ.ಚವ್ಹಾಣ್ ವಿವರಿಸಿದ್ದಾರೆ.

ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಮಾಲೀಕರು ಎಮ್ಮೆ, ಹಸುಗಳ ಹಾಲು ಹಿಂಡಿಕೊಂಡು ಬೀದಿಗೆ ಅಟ್ಟುವ ಪ್ರವೃತ್ತಿ ಮತ್ತೆ ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹಾಗೂ ಸಂಭವಿಸುವ ಅಪಘಾತಗಳಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಗಾಯಗಳಾಗಿ ಮೃತಪಡುವುದನ್ನು ತಡೆಗಟ್ಟಲು ಬಿಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಪ್ರಭು ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.

ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆ ಮೇಲೆ ದನಗಳು ಕಂಡು ಬಂದರೆ ತಕ್ಷಣ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗೆ ಸ್ಥಳೀಯ ಸಂಸ್ಥೆಗಳು ತಂದು ಬಿಡಬೇಕು ಎಂದು ಸೂಚನೆ ನೀಡಲಾಗಿದೆ. ಈ ಮೂಲಕ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಾ ಅಪಘಾತಕ್ಕೀಡಾಗಿ ಸಾವನ್ನಪ್ಪುವ ರಾಸುಗಳನ್ನು ರಕ್ಷಣೆ ಮಾಡಿ, ಅವುಗಳ ಪಾಲನೆ, ಪೋಷಣೆ ಮಾಡುವುದು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ, ಸಾರ್ವಜನಿಕರನ್ನು ರಕ್ಷಣೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ: ಸಾರ್ವಜನಿಕ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಿಡಾಡಿ ದನಗಳು ಕಂಡು ಬಂದರೆ ಕೂಡಲೇ ಸಾರ್ವಜನಿಕರು ಪ್ರಾಣಿ ಕಲ್ಯಾಣ ಸಹಾಯವಾಣಿ ಸಂಖ್ಯೆ 8277100200 ಅಥವಾ ಸ್ಥಳೀಯ ಸಂಸ್ಥೆಗಳ ಸಹಾಯವಾಣಿಗಳಿಗೆ ಕರೆ ಮಾಡಿ, ಈ ಬಗ್ಗೆ ದೂರು ನೀಡಿದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಬಿಡಾಡಿ ದನಗಳನ್ನು ಸಮೀಪದ ಗೋಶಾಲೆಗಳಿಗೆ ತಂದುಬಿಡುವ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರು ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ತಂದುಬಿಡುವಂತೆ ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ.

ನೋಂದಣಿಗೆ ಕ್ರಮ:
ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವ ಬಿಡಾಡಿ ದನಗಳ ಆರೈಕೆ, ಪಾಲನೆ ಮತ್ತು ಪೋಷಣೆ ಜತೆಗೆ ಪ್ರತಿಯೊಂದನ್ನು ಆನ್.ಲೈನ್ ಪೋರ್ಟಲ್.ನಲ್ಲಿ ನೋಂದಣಿ ಮಾಡಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

andolanait

Share
Published by
andolanait

Recent Posts

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

11 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

2 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

3 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

5 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

14 hours ago