ಕೃಷಿ

ವಾಯುಭಾರ ಕುಸಿತ: ಮಳೆ ಸಂಭವ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.
ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಡಿ.೯ರಿಂದ ೧೨ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು, ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕರಾದ ವಿ.ಎಸ್.ಪ್ರಕಾಶ್ ಪ್ರಕಾರ, ವಾಯುಭಾರ ಕುಸಿತವು ಬುಧವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರಿಂದ ಆಂಧ್ರಪದ್ರದೇಶ, ಪಾಂಡಿಚೆರಿ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಆದರೆ, ಇದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದ್ದು, ಹಗುರದಿಂದ ಸಾಧಾರಣ ಪ್ರವಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಆದರೆ, ಈ ಚಂಡ ಮಾರುತವು ಪ್ರಬಲವಾಗುವ ಲಕ್ಷಣಗಳಿಲ್ಲ. ಒಂದೆರದು ದಿನದಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ಭೂಸ್ಪರ್ಶವಾಗಿ ತನ್ನ ಸಾಮಥ್ರ್ಯ ಕಳೆದುಕೊಂಡು ದುರ್ಬಲವಾಗಲಿದೆ. ಬಳಿಕ ಕರ್ನಾಟಕದ ಮೂಲಕ ಹಾದು ಹೋಗಿ ಅರಬ್ಬೀ ಸಮುದ್ರ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಮೋಡಗಳ ಸಾಲು ಹಾದುಹೋಗುವ ಮಾರ್ಗದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.
ಡಿ.೧೩-೧೪ರಂದು ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರ ಮಳೆಯಾಗುವು ಸಂಭವವಿದೆ.

andolanait

Recent Posts

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

8 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

37 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

1 hour ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

1 hour ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago