ಮೈಸೂರು : ಕೇಂದ್ರ ಸರ್ಕಾರವು 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು ಡಿಸೆಂಬರ್ 15ರಿಂದ ನೋಂದಣಿ ಆರಂಭವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ. ರಾಜೇಂದ್ರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾಗಳ ಕಚೇರಿಯಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಓರ್ವ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುವುದು. ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 3578 ರೂ ನಿಗದಿಪಡಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 14 ಕಡೆಗಳಲ್ಲಿ ಮೈಸೂರಿನ ಎಪಿಎಂಸಿ ಆವರಣ, ಬಂಡಿಪಾಳ್ಯ, ನಂಜನಗೂಡಿನ ಎಪಿಎಂಸಿ ಆವರಣ, ಬಿಳಿಗೆರೆ ಖರೀದಿ ಕೇಂದ್ರ, ತಿ.ನರಸೀಪುರದ ಎಪಿಎಂಸಿ ಆವರಣ, ಬನ್ನೂರು ಎಪಿಎಂಸಿ ಆವರಣ, ಹುಣಸೂರು, ರತ್ನಪುರಿ ಎಂಪಿಎಂಸಿ ಆವರಣ, ಕೆ.ಆರ್. ನಗರದ ಚುಂಚನಕಟ್ಟೆ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ), ಸಾಲಿಗ್ರಾಮ, ಎಚ್.ಡಿ. ಕೋಟೆ ಎಪಿಎಂಸಿ, ಸರಗೂರು ಮತ್ತು ಪಿರಿಯಾಪಟ್ಟಣ, ಬೆಟ್ಟದಪುರ ಎಪಿಎಂಸಿ ಆವರಣದಲ್ಲಿ ಖರೀದಿ ಮಾಡಲಾಗುವುದು ಎಂದು ಹೇಳಿದರು ಆದರೆ ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ನೀಡಿದರು. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೊಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ಅವರು ತಿಳಿಸಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ , ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜನರಲ್ ಮ್ಯಾನೇಜರ್ ಪುಷ್ಪ ಮೈಸೂರು ಎಪಿಎಂಸಿ ಕಾರ‌್ಯದರ್ಶಿ ಕುಮಾರಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…
ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…
ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…
ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…