ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಅರಿಶಿಣ ಬೆಳೆಯನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ ಇದು ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಆದ್ದರಿಂದ ರೈತರಿಗೆ ಅನುಕೂಲವಾಗಲು ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪ್ರಸ್ತುತ ಕ್ವಿಂಟಾಲ್ ಅರಿಶಿನಗೆ 5,500ರಿಂದ 6000 ರೂ. ಇದ್ದು ಅರಿಶಿಣ ಕೃಷಿ ಸೇರಿದಂತೆ ಉತ್ಪಾದನೆ ವೆಚ್ಚ ದುಬಾರಿಯಾಗಿದೆ. ಆದ್ದರಿಂದ ಕೇಂದ್ರದ ಎಂಎಸ್‌ಪಿ ಮಾರ್ಗಸೂಚಿ ಅನ್ವಯ ಪ್ರತಿ ಎಕರೆಗೆ 1,90,000ರೂ. ವೆಚ್ಚವಾಗುತ್ತದೆ. ಈಗಿರುವ ಬೆಲೆಯ ಅತಿ ಕಡಿಮೆಯಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಎಂಪಿಎಸ್ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ನಮ್ಮ ರಾಜ್ಯಕ್ಕೂ ಜಾರಿಗೆ ತಂದು ಪ್ರತಿ ಕ್ವಿಂಟಾಲ್ ಅರಿಶಿಣ ಬೆಳೆಗೆ 17,500 ರೂಗಳನ್ನು ಸರ್ಕಾರದಿಂದ ಬೆಂಬಲ ಬೆಲೆಯಾಗಿ ಘೋಷಿಸಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕ ಸಿ,ಎಸ್ ನಿರಂಜನ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸದನದಲ್ಲಿ ಚುಕ್ಕಿ ಪ್ರಶ್ನೆಯ ಸಮಯದಲ್ಲಿ ಸದನದ ಗಮನ ಸಳೆಯುವುದಾಗಿ ಶಾಸಕರು ತಿಳಿಸಿದರು.