ಹುಬ್ಬಳ್ಳಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಯಿಂದ ಬಾದಾಮಿಗೆ ತೆರಳುವ ಮಾರ್ಗದಲ್ಲಿ ನವಲಗುಂದ ಬಳಿಯ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದಾದ ಬೆಳೆಹಾನಿ ವೀಕ್ಷಿಸಿದರು.ಹಾಗೂ ಅಲ್ಲಿ ಸ್ಥಳೀಯ ರೈತರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೆ.ಎನ್. ಗಡ್ಡಿ, ಮಾಜಿ ಶಾಸಕರಾದ ಕೋನರೆಡ್ಡಿ, ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನಿಲ್ ಪಾಟೀಲ್, ವಿನೋದ್ ಅಸೂಟಿ, ವಿಜಯ್ ಕುಲಕರ್ಣಿ ಹಾಜರಿದ್ದರು.