Mysore
23
haze

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ನಾಳೆ ರೈತರ ಪ್ರತಿಭಟನೆ

ತಿ.ನರಸೀಪುರ : ಕಬ್ಬಿನ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಡಿ.೨ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘ ತಿಳಿಸಿದೆ.
ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್ ಹಾಗೂ ತಾಲ್ಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಕಬ್ಬಿಗೆ  ಎಫ್‌ಆರ್‌ಪಿ ನಿಗದಿ ಮಾಡಬೇಕು ಎಂದು ರಾಜ್ಯ ರೈತ ಸಂಘದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸೌಜನ್ಯಕ್ಕಾದರೂ ಸಚಿವರು ಭೇಟಿ ನೀಡಿ ಮನವಿ ಆಲಿಸಿಲ್ಲ ಎಂದು ಕಿಡಿಕಾರಿದರು.

ಸರ್ಕಾರ ಪೊಲೀಸರ ಮೂಲಕ ಪ್ರತಿಭಟನಾ ರೈತರನ್ನು ಬಂಧಿಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದೆ, ರೈತರ ಬೇಡಿಕೆಗಳನ್ನು ಕಾನೂನಿನಡಿ ಬಗೆಹರಿಸಬೇಕಿರುವ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ಈ ವರ್ತನೆಯನ್ನು ಖಂಡಿಸಿ ಹಾಗೂ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಡಿ.೨ ರಂದು ನಡುಂಲಿರುವ ಪ್ರತಿಭಟನೆಯಲ್ಲಿ ತಾಲ್ಲೂಕಿನಿಂದ ರೈತರು, ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಂಘದ ಮುಖಂಡರಾದ ಬಿ.ಪಿ.ಪರಶಿವಮೂರ್ತಿ, ಬನ್ನಹಳ್ಳಿಹುಂಡಿ ರಾಜೇಂದ್ರ, ಪ್ರದೀಪ್, ಗೌರಿಶಂಕರ್, ಶೇಖರ್, ಆದಿಬೆಟ್ಟಹಳ್ಳಿ ಕುಮಾರ್, ಉಮೇಶ್, ಕೆ.ಜಿ.ಗುರುಸ್ವಾಮಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!