ತಿ.ನರಸೀಪುರ : ಕಬ್ಬಿನ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಡಿ.೨ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘ ತಿಳಿಸಿದೆ.
ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್ ಹಾಗೂ ತಾಲ್ಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಕಬ್ಬಿಗೆ ಎಫ್‌ಆರ್‌ಪಿ ನಿಗದಿ ಮಾಡಬೇಕು ಎಂದು ರಾಜ್ಯ ರೈತ ಸಂಘದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸೌಜನ್ಯಕ್ಕಾದರೂ ಸಚಿವರು ಭೇಟಿ ನೀಡಿ ಮನವಿ ಆಲಿಸಿಲ್ಲ ಎಂದು ಕಿಡಿಕಾರಿದರು.
ಸರ್ಕಾರ ಪೊಲೀಸರ ಮೂಲಕ ಪ್ರತಿಭಟನಾ ರೈತರನ್ನು ಬಂಧಿಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದೆ, ರೈತರ ಬೇಡಿಕೆಗಳನ್ನು ಕಾನೂನಿನಡಿ ಬಗೆಹರಿಸಬೇಕಿರುವ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ಈ ವರ್ತನೆಯನ್ನು ಖಂಡಿಸಿ ಹಾಗೂ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಡಿ.೨ ರಂದು ನಡುಂಲಿರುವ ಪ್ರತಿಭಟನೆಯಲ್ಲಿ ತಾಲ್ಲೂಕಿನಿಂದ ರೈತರು, ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಂಘದ ಮುಖಂಡರಾದ ಬಿ.ಪಿ.ಪರಶಿವಮೂರ್ತಿ, ಬನ್ನಹಳ್ಳಿಹುಂಡಿ ರಾಜೇಂದ್ರ, ಪ್ರದೀಪ್, ಗೌರಿಶಂಕರ್, ಶೇಖರ್, ಆದಿಬೆಟ್ಟಹಳ್ಳಿ ಕುಮಾರ್, ಉಮೇಶ್, ಕೆ.ಜಿ.ಗುರುಸ್ವಾಮಿ ಹಾಜರಿದ್ದರು.
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…