Mysore
18
clear sky

Social Media

ಶನಿವಾರ, 03 ಜನವರಿ 2026
Light
Dark

ಕಬ್ಬಿನ ದರ ಏರಿಕೆ ವಿಚಾರ : ವಿಶ್ವ ರೈತ ದಿನಾಚರಣೆಯೊಳಗೆ ತೀರ್ಮಾನ ಕೈಗೊಳ್ಳದಿದ್ದರೆ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ

ಬೆಂಗಳೂರು: ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಬ್ಬಿನ ಎಫ್ ಆರ್ ಪಿ ದರ ಏರಿಕೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ಕಡಿತವಾಗದಿದ್ದರೇ  26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಬ್ಬು ಬೆಳಗಾರರ ಒಕ್ಕೂಟ ಎಚ್ಚರಿಕೆ ನೀಡಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ 27ನೇ ದಿನದ ಧರಣಿ ನಿರತ ರೈತರು ಈ ನಿರ್ಧಾರ ಕೈಗೊಂಡಿದ್ದಾರೆ. ವಿಶ್ವ ರೈತ ದಿನದ  ಆಚರಣೆಯೊಳಗೆ (ಡಿ.23)  ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಮುತ್ತಿಗೆ ಅನಿವಾರ್ಯ ಎಂದು
ಕಬ್ಬು ಬೆಳಗಾರರ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ನಾಲ್ಕು ತಿಂಗಳಿಂದ ಕಬ್ಬು ನುರಿಸಿರುವ ಕಾರ್ಖಾನೆಗಳು ರೈತರಿಗೆ ಕಬ್ಬಿನ ಹಣವನ್ನೇ ಪಾವತಿಸಿಲ್ಲ. ಕೆಲವು ಕಾರ್ಖಾನೆಗಳು ನೆಪ ಮಾತ್ರಕ್ಕೆ ಅಲ್ಪ ಸ್ವಲ್ಪ ಪಾವತಿಸಿವೆ.
ಎಫ್ ಆರ್ ಪಿ ನಿಯಮ ಪ್ರಕಾರ 14 ದಿವಸದಲ್ಲಿ ಪಾವತಿಸಬೇಕು. ಆದರೆ ಕಾರ್ಖಾನೆಗಳು ನಿಯಮ ಉಲ್ಲಂಘನೆ ಮಾಡಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣ ಉಳಿಸಿಕೊಂಡಿವೆ. ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

23ರಂದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿದ ಕಾಯಕಯೋಗಿಗಳಿಗೆ ಗೌರವ ಪುರಸ್ಕಾರ ನೀಡಲು  ಸಂಯುಕ್ತ ಕಿಸಾನ್ ಮೋರ್ಚಾ *ರಾಷ್ಟ್ರೀಯ ನಾಯಕ ಜಗಜಿತ್ ಸಿಂಗ್ ಧಲೆವಾಲ ಪಂಜಾಬಿನಿಂದ ಆಗಮಿಸುತ್ತಿದ್ದಾರೆ.

19/20ರಂದು ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರು ಹಾಗೂ ಸಂಸದರ ನಿಯೋಗದೊಂದಿಗೆ ಕೇಂದ್ರ ಕೃಷಿ ಸಚಿವ ಹಾಗೂ ಆಹಾರ ಸಚಿವರನ್ನು ಭೇಟಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದರು. ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪರಶುರಾಮ್, ಸುರೇಶ್, ರೇವಣ್ಣ, ಮೈಸೂರು ಜಿಲ್ಲೆಯ ರಂಗಸಮುದ್ರ, ಹಿಟ್ಟುವಳ್ಳಿ ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!