ಬೆಂಗಳೂರು: ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಬ್ಬಿನ ಎಫ್ ಆರ್ ಪಿ ದರ ಏರಿಕೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ಕಡಿತವಾಗದಿದ್ದರೇ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಬ್ಬು ಬೆಳಗಾರರ ಒಕ್ಕೂಟ ಎಚ್ಚರಿಕೆ ನೀಡಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ 27ನೇ ದಿನದ ಧರಣಿ ನಿರತ ರೈತರು ಈ ನಿರ್ಧಾರ ಕೈಗೊಂಡಿದ್ದಾರೆ. ವಿಶ್ವ ರೈತ ದಿನದ ಆಚರಣೆಯೊಳಗೆ (ಡಿ.23) ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಮುತ್ತಿಗೆ ಅನಿವಾರ್ಯ ಎಂದು
ಕಬ್ಬು ಬೆಳಗಾರರ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ನಾಲ್ಕು ತಿಂಗಳಿಂದ ಕಬ್ಬು ನುರಿಸಿರುವ ಕಾರ್ಖಾನೆಗಳು ರೈತರಿಗೆ ಕಬ್ಬಿನ ಹಣವನ್ನೇ ಪಾವತಿಸಿಲ್ಲ. ಕೆಲವು ಕಾರ್ಖಾನೆಗಳು ನೆಪ ಮಾತ್ರಕ್ಕೆ ಅಲ್ಪ ಸ್ವಲ್ಪ ಪಾವತಿಸಿವೆ.
ಎಫ್ ಆರ್ ಪಿ ನಿಯಮ ಪ್ರಕಾರ 14 ದಿವಸದಲ್ಲಿ ಪಾವತಿಸಬೇಕು. ಆದರೆ ಕಾರ್ಖಾನೆಗಳು ನಿಯಮ ಉಲ್ಲಂಘನೆ ಮಾಡಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣ ಉಳಿಸಿಕೊಂಡಿವೆ. ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
23ರಂದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿದ ಕಾಯಕಯೋಗಿಗಳಿಗೆ ಗೌರವ ಪುರಸ್ಕಾರ ನೀಡಲು ಸಂಯುಕ್ತ ಕಿಸಾನ್ ಮೋರ್ಚಾ *ರಾಷ್ಟ್ರೀಯ ನಾಯಕ ಜಗಜಿತ್ ಸಿಂಗ್ ಧಲೆವಾಲ ಪಂಜಾಬಿನಿಂದ ಆಗಮಿಸುತ್ತಿದ್ದಾರೆ.
19/20ರಂದು ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರು ಹಾಗೂ ಸಂಸದರ ನಿಯೋಗದೊಂದಿಗೆ ಕೇಂದ್ರ ಕೃಷಿ ಸಚಿವ ಹಾಗೂ ಆಹಾರ ಸಚಿವರನ್ನು ಭೇಟಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದರು. ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪರಶುರಾಮ್, ಸುರೇಶ್, ರೇವಣ್ಣ, ಮೈಸೂರು ಜಿಲ್ಲೆಯ ರಂಗಸಮುದ್ರ, ಹಿಟ್ಟುವಳ್ಳಿ ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…