ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಒತ್ತಾಯಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಕ್ಷೇಮ ಕಾಪಾಡುವ ಜತೆಗೆ ಸುಭಿಕ್ಷ ನೆಲೆಸಲು ಸರ್ಕಾರ ಮುಂದಾಗಬೇಕು. ಆದರೆ, ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲಾಗದ ಬಿಜೆಪಿ ನೆಗಟಿವ್ ರಾಜಕೀಯ ಮಾಡುತ್ತಿದೆ ಎಂದು ದೂರಿದರು.
ಟಿಪ್ಪು ಪತ್ರಿಮೆ ಸ್ಥಾಪನೆ ಹೇಳಿಕೆ ವಿಚಾರವಾಗಿ ಬಜರಂಗದಳದ ಸಕಲೇಶಪುರ ರಘು, ಮೈಸೂರಿನ ಬಿಜೆಪಿ ಮುಖಂಡ ಗಿರಿಧರ್ ಅವರು ತನ್ವೀರ್ ಸೇಠ್ ಅವರನ್ನು ಸಂಹಾರ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಖಂಡ ನೀಯ. ಇವರಿಬ್ಬರ ವಿರುದ್ಧ ಅಲ್ಲಿನ ಜಿಲ್ಲಾಡಳಿತಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮ ಪಕ್ಷದ ಶಾಸಕ, ಮಾಜಿ ಸಚಿವರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದರೂ ರಾಜ್ಯ ಕಾಂಗ್ರೆಸ್‌ನ ಯಾವೊಬ್ಬ ನಾಯಕರೂ ತನ್ವೀರ್ ಸೇಠ್ ರಕ್ಷಣೆಗೆ ಮುಂದಾಗದಿರುವುದು ಖಂಡನೀಯ ಎಂದರು.
ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಸ್ವಾಮಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…