ಅಹಮದಾಬಾದ್ : ಐಪಿಎಲ್ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಗೆಲುವಿನ ಓಟ ಮುಂದುವರಿದಿದ್ದು, ಭಾನುವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 56 ರನ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
11 ಪಂದ್ಯಗಳಲ್ಲಿ ಟೈಟಾನ್ಸ್ ಎಂಟನೇ ಜಯವಾಗಿದ್ದು, 16 ಅಂಕಗಳಿಗೆ ಮತ್ತು ಪ್ಲೇ-ಆಫ್‌ಗೆ ಹತ್ತಿರವಾಗಿದೆ.
ಶುಭಮನ್ ಗಿಲ್ (ಔಟಾಗದೆ 94) ಮತ್ತು ವೃದ್ಧಿಮಾನ್ ಸಹಾ (81) ನಡುವಿನ ಫ್ರಾಂಚೈಸಿ ದಾಖಲೆಯ 142 ರನ್‌ಗಳ ಜೊತೆಯಾಟದಿಂದ ಎರಡು ವಿಕೆಟ್‌ಗೆ 227 ರನ್ ಗಳಿಸಿದ ಗುಜರಾತ್ ಟೈಟಾನ್ಸ್, ಎಲ್‌ಎಸ್‌ಜಿಯ ಚೇಸ್ ವೇಳೆ ಸಮಗ್ರ ರೀತಿಯಲ್ಲಿ ಬಲವಾಗಿ ಮರಳಿ ಗೆಲುವಿನ ಕೇಕೆ ಹಾಕಿತು.
228 ರನ್‌ಗಳನ್ನು ಬೆನ್ನಟ್ಟಿದ ಎಲ್‌ಎಸ್‌ಜಿ ಮೊದಲ ವಿಕೆಟ್‌ಗೆ 102 ರನ್ ಗಳಿಸಿ ಬಲಿಷ್ಠ ಆಟ ತೋರಿತ್ತು.ಮೇಯರ್ಸ್ ಮತ್ತು ಡಿ ಕಾಕ್ ಇಬ್ಬರೂ ವೇಗವನ್ನು ಕಂಡುಕೊಳ್ಳುವುದರೊಂದಿಗೆ ಕೇವಲ ನಾಲ್ಕು ಓವರ್‌ಗಳಲ್ಲಿ ಗುರಿಯಿಂದ 50 ರನ್ ಗಳಿಸಿದರು. ಆದರೆ ಜಿಟಿ ಬಿಗಿ ಬೌಲಿಂಗ್ ಮೂಲಕ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಮೋಹಿತ್ ಶರ್ಮಾ 4 ವಿಕೆಟ್ ಕಬಳಿಸಿದರು.
ಕ್ವಿಂಟನ್ ಡಿ ಕಾಕ್ ಅವರ ಅದ್ಭುತ 70 ಮತ್ತು ಅಗ್ರಸ್ಥಾನದಲ್ಲಿ ಕೈಲ್ ಮೇಯರ್ಸ್ ಅವರ ಚುರುಕಾದ 48 ರ ಹೊರತಾಗಿಯೂ, ಲಕ್ನೋ ಮಧ್ಯಮ ಕ್ರಮಾಂಕದ ವೈಫಲ್ಯದ ಮೂಲಕ ಬೃಹತ್ ಮೊತ್ತ ಗುರಿ ತಲುಪಲು ಪರದಾಡಿತು. 20 ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 171 ರನ್ ಗಳಿಸಿತು.
ಪಂದ್ಯಶ್ರೇಷ್ಠ:ಶುಭ್‌ಮನ್ ಗಿಲ್
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…