ಬೆಂಗಳೂರು: ಹವಾಮಾನ ವಿಜ್ಞಾನಿ ಪ್ರಸಾದ್ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಒಣ ಹವೆ ಮುಂದುವರಿಯಲಿದ್ದು, 5 ನೇ ದಿನ ಅಂದರೆ ಡಿಸೆಂಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 20 ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾತನಾಡಿರುವ ಹವಾಮಾನ ವಿಜ್ಞಾನಿ ಪ್ರಸಾದ್, ಉತ್ತರ ಒಳನಾಡಿನ ಐದು ದಿನವೂ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಒಣಹವೆ ಇರಲಿದ್ದು, ನಾಲ್ಕನೇ ದಿನದಿಂದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಕೊಡಗಿನಲ್ಲಿ ಒಂದೆರಡು ದಿನ ಹಗುರ ಮಳೆಯಾಗಲಿದೆ. ಐದನೇ ದಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹೊರತು ಪಡಿಸಿ ಉಳಿದೆಡೆ ಒಂದೆರಡು ಕಡೆ ಹಗುರ ಮಳೆಯಾಗಲಿದೆ ಎಂದರು.ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15.6 ಡಿಗ್ರಿ ಸೆಲ್ಸಿಯಸ್ ಇದ್ದು, ಇಂದು ಮತ್ತು ನಾಳೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಇರಲಿದೆ. ಬೆಳಿಗ್ಗೆ ಮಂಜು ಇರಲಿದೆ. ನಾಳೆ ಗರಿಷ್ಠ 28, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಅತೀ ಕಡಿಮೆ ಕನಿಷ್ಠ ಉಷ್ಣಾಂಶ ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಈಶಾನ್ಯ ಬಂಗಾಳಕೊಲ್ಲಿ ಮತ್ತು ಪೂರ್ವ ಭೂಮಧ್ಯ ಹಿಂದೂ ಮಹಾಸಾಗರದಲ್ಲಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಆಗಿದೆ. ಈ ತೀವ್ರತೆ ಮುಂದುವರಿದ್ರೆ ಮುಂದಿನ ಎರಡು ದಿನಗಳಲ್ಲಿ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…