‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ‘ಆಂದೋಲನ’ ವೆಬ್ಸೈಟ್ನ್ನು ನಟ ಶಿವರಾಜ್ಕುಮಾರ್ ರಿ-ಲಾಂಚ್ ಮಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಪ.ಮಲ್ಲೇಶ್, ಪತ್ರಕರ್ತ ಪಿ.ಸಾಯಿನಾಥ್ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರನ್ನು ‘ಪತ್ರಿಕೆ’ ಸಂಪಾದಕ ರವಿ ಕೋಟಿ ಸ್ವಾಗತಿಸಿದರು. ಶಾಸಕ ಎಚ್.ಪಿ.ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಶ್ರೀಧರ್ ಆರ್.ಭಟ್, ಮಂಜು ಕೋಟೆ, ಶೀತಲ್ ಕೋಟಿ, ರಶ್ಮಿ ಕೋಟಿ, ಮುಡಾ ಮಾಜಿ ಸದಸ್ಯ ಭಾಸ್ಕರ್ ಎನ್.ಗೌಡ ಮತ್ತಿತರರು ಚಿತ್ರದಲ್ಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ , ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಡಾ.ಬಿ.ಜೆ.ವಿಜಯಕುಮಾರ್, ಎಸ್.ಮಹದೇವಯ್ಯ, ಪ್ರೊ.ಮುಜಾಫರ್ ಅಸ್ಸಾದಿ, ನಿರ್ಮಲ ಕೋಟಿಯವರು ಸಭಿಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.
‘ಆಂದೋಲನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಘಟಿಕೋತ್ಸವ ಭವನಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದರು. ಡಿಸಿ ಡಾ.ಬಗಾದಿ ಗೌತಮ್, ರವಿ ಕೋಟಿ, ರಶ್ಮಿ ಕೋಟಿ, ಎಚ್.ಎಸ್.ದಿನೇಶ್ಕುಮಾರ್, ಮುಂತಾದವರು ಚಿತ್ರದಲ್ಲಿದ್ದಾರೆ.