ಮೈಸೂರು : ನಾಳೆ ಆಂದೋಲನ ದಿನ ಪತ್ರಿಕೆಗೆ 50 ರ ತುಂಬು ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಳೆ ಹುಣಸೂರು ರಸ್ತೆಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿರುವ ಘಟಿಕೋತ್ಸವ ಭವನದಲ್ಲಿ 50 ನೇ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹಿರಿಯ ಸಾಹಿತಿ ದೇವನೂರು ಮಹಾದೇವ, ಆಂದೋಲನ ಪತ್ರಿಕೆಯ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ, ಮಾಜಿ ಮುಖ್ಯಮಂತ್ರಿಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಹಿರಿಯ ಪತ್ರಕರ್ತರಾದ ಪಿ. ಸಾಯಿನಾಥ್, ಖ್ಯಾತ ನಟ ಶಿವರಾಜ್ ಕುಮಾರ್, ಹಿರಿಯ ಸಮಾಜವಾದಿ ಪ. ಮಲ್ಲೇಶ್ ಗಣ್ಯರು ವೇದಿಕೆಯನ್ನು ಅಲಂಕರಿಸುತ್ತಿದ್ದಾರೆ.
ಆಂದೋಲನ ದಿನ ಪತ್ರಿಕೆ
ಆಂದೋಲನ ಎಂಬುದು ಇತಿಹಾಸದಲ್ಲಿ ಒಂದು ಅವಿಸ್ಮರಣೀಯ ಸಂದರ್ಭವಾಗಿದೆ. 1972 ರಲ್ಲಿ ಪ್ರಾರಂಭವಾದ ಆಂದೋಲನ ಪತ್ರಿಕೆಯು ಸಮಾಜಮುಖಿ ಚಿಂತನೆ ಹಾಗೂ ವಿಚಾರಗಳನ್ನು ಓದುಗರಿಗೆ ನೀಡುತ್ತಾ. ಓದುಗರ ಮನದಾಳದಲ್ಲಿ ತನ್ನದೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಈ ಪತ್ರಿಕೆಗೀಗ 50 ರ ಸಂಭ್ರಮ ಮೈಸೂರು ಭಾಗದ ಜನರ ಆಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಂಡ ಈ ಪತ್ರಿಕೆ ಜನಜೀವನದಲ್ಲಿ ಹಾಸುಹೊಕ್ಕಾಗಿ ಅಳಿಸಲಾಗದ ಛಾಪು ಮೂಡಿಸುತ್ತಾ ಇಂದು ಆಂದೋಲನ ಪತ್ರಿಕೆಯು ಒಂದು ಸಂಘಟಿತ ಶಕ್ತಿಯಾಗಿ ಬೆಳೆದಿದೆ. ಇದಕ್ಕೆ ಮೂಲ ಕಾರಣ ಓದುಗರೇ ಆಗಿದ್ದಾರೆ. ಪತ್ರಿಕೆಗಳನ್ನು ಕೊಂಡು, ಓದಿ ಬೆಳೆಸುತ್ತಿದ್ದಾರೆ ಸಾಕಷ್ಟು ಓದುಗರು.
ಪತ್ರಿಕೆಯು 50 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭವನ್ನು ದಾಖಲಿಸುವ ಸಲುವಾಗಿ ನಾಳೆ ಜುಲೈ 6 ನೇ ತಾರೀಖಿನಂದು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಂದೋಲನ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಅಂಕಣಗಳ ಸಂಗ್ರಹವನ್ನು ಹೊತ್ತ ʼಇದ್ದದ್ದು ಇದ್ದಾಂಗ” ಎಂಬ ಪುಸ್ತಕವನ್ನು ಹೊರತರಲಾಗುತ್ತಿದೆ. ಇದರ ಜೊತೆಗೆ ʼಆಂದೋಲನ” ಡಾಕ್ಯುಮೆಂಟರಿಯನ್ನು ಬಿಡುಗಡೆ ಮಾಡುವ ಮೂಲಕ ಈ ಸಂದರ್ಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದಿದ್ದೇವೆ. ಬನ್ನಿ ಈ ಪತ್ರಿಕೆಯ ಸಾರ್ಥಕ ಪಯಣದಲ್ಲಿ ಎಲ್ಲರೂ ಜೊತೆಯಾಗಿ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…