ಕೋಟಿ ಅವರು ಕಂಡುಂಡ ನೋವು-ನಲಿವುಗಳು, ಸಾಧಕ-ಬಾಧಕಗಳನ್ನು ನೆನೆಯುವ, ನೆನಪಿಸುವ ಕಾರ್ಯಕ್ರಮ ಇದಾಗಿದೆ. ಕೋಟಿ ಅವರ ಒಡನಾಡಿಗಳು, ಅವರನ್ನು ಬದುಕಿನ ಭಾಗವಾಗಿಸಿಕೊಂಡವರು,ಅವರಿಂದ ಸಹಾಯ ಪಡೆದು ಬದುಕನ್ನು ರೂಪಿಸಿಕೊಂಡವರು, ʼಪತ್ರಿಕೆʼ ಯ ಓದುಗರು..
ಹೀಗೆ ಎಲ್ಲವೂ ಸೇರಿ ʼಆಂದೋಲನʼ ಮತ್ತು ಕೋಟಿ ಅವರನ್ನು ಕುರಿತು ಪುನರ್ ಮನನ ಮಾಡಿಕೊಳ್ಳಬಹುದಾದ ಅಪೂರ್ವ ವೇದಿಕೆ ಸಿದ್ದವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ. ʼಆಂದೋಲನʼ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಹೆಸರಾಂತ ನಟ ಡಾ. ಶಿವರಾಜ್ ಕುಮಾರ್, ಹಿರಿಯ ಸಾಹಿತಿ ದೇವನೂರು ಮಹಾದೇವ, ಹಿರಿಯ ಸಮಾಜವಾದಿ ಪ. ಮಲ್ಲೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯಲ್ಲಿ ʼಆಂದೋಲನʼ ಪತ್ರಿಕೆಯ ಸಂಪಾದಕ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಭಾಗಿಯಾಗಲಿದ್ದಾರೆ.
1972 ರಲ್ಲಿ ಪ್ರಾರಂಭವಾದ ʼಪತ್ರಿಕೆʼ ತನ್ನ 50 ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಇಂದು ಸಂಜೆ 4 ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ʼಆಂದೋಲನ-50 ಸಾರ್ಥಕ ಪಯಣʼ ಕಾರ್ಯಕ್ರಮ ಆಯೋಜನೆಯಾಗಿದೆ.
ಗಣ್ಯರ ಸ್ವಾಗತಕ್ಕೆ ಸಕಲ ಸಿದ್ಧತೆ
ಘಟಿಕೋತ್ಸವ ಭವನದ ದ್ವಾರದಲ್ಲಿ ಸ್ಥಾಪಿಸಿರುವ ʼʼಆಂದೋಲನ ಡಿಜಿಟಲ್ʼ ಕಿಯೋಸ್ಕ್ ನಲ್ಲಿ ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳು ಸೇರಿ ರಾಜ್ಯದೆಲ್ಲೆಡೆಯಿಂದ ಆಗಮಿಸಲಿರುವ ಗಣ್ಯ ಮಾನ್ಯರು ʼಪತ್ರಿಕೆʼ ನಡೆದು ಬಂದ ಹಾದಿ ಬಗ್ಗೆ ಚುಟುಕು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ. ಇವರ ನುಡಿಗಳು ʼಆಂದೋಲನ ಟಿವಿʼ ಡಿಜಿಟಲ್ ವೇದಿಕೆಯಲ್ಲಿ ಪ್ರಸಾರವಾಗಲಿದೆ. ನೂತನ ʼಆಂದೋಲನʼ ವೆಬ್‌ಸೈಟ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾವರಣಗೊಳಿಸಲಿದ್ದಾರೆ.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…