ಮೈಸೂರು: ಆಂದೋಲನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ಇಂದು ಅರ್ಥ ಪೂರ್ಣ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್ ಪುತ್ರ ಜಯಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಭಾಗವಹಿಸಿದ್ದರು.
ಸಾಹಿತಿ, ಪತ್ರಕರ್ತ ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…